- Advertisement -
- Advertisement -






ಉಪ್ಪಿನಂಗಡಿ: ಕ್ಯಾನ್ಸರ್ ಪೀಡಿತ ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಲು ಗ್ರಾಮದ ಚಾಮೇತಮೂಲೆ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಅಂಬೇಡ್ಕರ್ ಎಂಬವರ ಪತ್ನಿ ಸೀತಾ (47) ಎಂದು ಗುರುತಿಸಲಾಗಿದೆ.
ಅಂಬೇಡ್ಕರ್ ಎಂಬವರ ಪತ್ನಿ ಸೀತಾ ಎಂಬವರು ಕ್ಯಾನ್ಸರ್ ಪೀಡಿತೆಯಾಗಿದ್ದು, ನಿರಂತರ ಚಿಕಿತ್ಸೆ ಪಡೆದರೂ ಗುಣಮುಖರಾಗದೆ ಇದ್ದ ಕಾರಣ ಮನನೊಂದು ಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೈದಿರುತ್ತಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -