Thursday, August 6, 2026
spot_imgspot_img
spot_imgspot_img

ಜುಲೈ 4ರಂದು ಉಪ್ಪಿನಂಗಡಿಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘದ 5ನೇ ಶಾಖೆಯ ಉದ್ಘಾಟನಾ ಸಮಾರಂಭ

- Advertisement -
- Advertisement -

ಉಪ್ಪಿನಂಗಡಿ: ವಿಟ್ಲ ಗ್ರಾಮೀಣ ಸಹಕಾರಿ ಸಂಘದ ನೂತನ 5ನೇ ಶಾಖೆಯ ಉದ್ಘಾಟನಾ ಸಮಾರಂಭವು ಜುಲೈ 4ರಂದು ಶನಿವಾರ ಬೆಳಿಗ್ಗೆ 10.30ಕ್ಕೆ ಉಪ್ಪಿನಂಗಡಿಯ ಗಾಂಧಿ ಪಾರ್ಕ್‌ನ ರಾಮ ಗೋಪಾಲ ಕಾಂಪ್ಲೆಕ್ಸ್‌ನ ಪ್ರಥಮ ಮಹಡಿಯಲ್ಲಿ ನಡೆಯಲಿದೆ.

ವಿಟ್ಲದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸಂಘವು ಈಗಾಗಲೇ ಕಲ್ಲಡ್ಕ, ಬಿ.ಸಿ.ರೋಡ್, ಕನ್ಯಾನ ಹಾಗೂ ಪುತ್ತೂರಿನಲ್ಲಿ ಶಾಖೆಗಳನ್ನು ಯಶಸ್ವಿಯಾಗಿ ನಡೆಸುತ್ತಿದ್ದು, ಇದೀಗ ಉಪ್ಪಿನಂಗಡಿಯಲ್ಲಿ ತನ್ನ 5ನೇ ಶಾಖೆಯನ್ನು ಆರಂಭಿಸುತ್ತಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಹೆಚ್. ಜಗನ್ನಾಥ ಸಾಲಿಯಾನ್ ವಹಿಸಲಿದ್ದಾರೆ. ಶಾಖಾ ಕಚೇರಿಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದು, ಭದ್ರತಾ ಕೊಠಡಿಯನ್ನು ಮಾಜಿ ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಶಾಖೆಯ ಗಣಕೀಕರಣವನ್ನು ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್. ಎನ್. ರಮೇಶ್ ನೆರವೇರಿಸಲಿದ್ದು, ಕರ್ನಾಟಕ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಪ್ರಜ್ವಲನೆ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಕೆ. ಅಬ್ದುಲ್ ರಹಿಮಾನ್, ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷ ಹಾಗೂ ಉಪ್ಪಿನಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಕೆ.ವಿ. ಪ್ರಸಾದ್ ಹಾಗೂ ರಾಮ ಗೋಪಾಲ ಕಾಂಪ್ಲೆಕ್ಸ್‌ನ ಕಟ್ಟಡ ಮಾಲಕರಾದ ಕೆ. ರಾಜೇಶ್ ನಾಯಕ್ ಭಾಗವಹಿಸಲಿದ್ದಾರೆ.

- Advertisement -

Related news

error: Content is protected !!