Monday, August 10, 2026
spot_imgspot_img
spot_imgspot_img

ಉಪ್ಪಿನಂಗಡಿ: ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಳವುಗೈದ ಆರೋಪಿಯ ಬಂಧನ..!

- Advertisement -
- Advertisement -

ಉಪ್ಪಿನಂಗಡಿ: ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ, ಆರೋಪಿಯಿಂದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಸುಳ್ಯ ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಎಂದು ಗುರುತಿಸಲಾಗಿದೆ.

ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಜೂ.4ರಂದು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಎಳೆದು ಬಲವಂತವಾಗಿ ಕಸಿದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಪ್ಪಿನಂಗಡಿ ಠಾಣಾ ಪೊಲೀಸರು ಈ ಬಗ್ಗೆ ತನಿಖೆ ನಡೆಸಿದ್ದು, ಆರೋಪಿಯನ್ನು ನೆಕ್ಕಿಲಾಡಿ ಎಂಬಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಆರೋಪಿತನಿಂದ ಅಂದಾಜು ರೂ. 4,54,000/-ಮೌಲ್ಯದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್ ಸೇರಿದಂತೆ, ಒಟ್ಟು 5,05,000 ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದ್ದು, ಸದ್ರಿ ಬೈಕ್ ಗೆ ಸಂಬಂಧಿಸಿ ಮೈಸೂರು ನಗರದ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.

ಆರೋಪಿ ಪತ್ತೆ ಕಾರ್ಯದಲ್ಲಿ, ಮಾನ್ಯ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್ ರವರ ನೇತೃತ್ವದಲ್ಲಿ, ಉಪ್ಪಿನಂಗಡಿ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಕಾರ್ಯಚರಣೆ ನಡೆಸಿದ್ದರು.

- Advertisement -

Related news

error: Content is protected !!