Friday, July 24, 2026
spot_imgspot_img
spot_imgspot_img

ಉಪ್ಪಿನಂಗಡಿ: ಬಾಲಕಿಯನ್ನು ಹಿಂಬಾಲಿಸಿ ಮನೆಗೆ ಕರೆದ ಆರೋಪಿ ಪೊಲೀಸ್ ವಶಕ್ಕೆ

- Advertisement -
- Advertisement -

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಆತನ ಮನೆಗೆ ಕರೆದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

ಆರೋಪಿಯನ್ನು ಮುಹಮ್ಮದ್ ಮುಸ್ತಫಾ (40) ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾದ ದೂರುದಾರರ ಅಪ್ರಾಪ್ತ ಪ್ರಾಯದ ಸಹೋದರಿಯನ್ನು ಆರೋಪಿ ಮುಹಮ್ಮದ್ ಮುಸ್ತಫಾ ಎಂಬಾತನು ಕಳೆದ ಎರಡು ತಿಂಗಳುಗಳಿಂದ ಬಸ್ ನಿಲ್ದಾಣದಿಂದ ಹಿಂಬಾಲಿಸುತ್ತಿದ್ದು, ಕಳೆದ ತಿಂಗಳ 29ನೇ ತಾರೀಕಿನಂದು ಬಾಲಕಿಯನ್ನು ಆರೋಪಿಯು ಆತನ ಮನೆಗೆ ಕರೆದಿರುತ್ತಾನೆ.

ಈ ಬಗ್ಗೆ ಆಕೆ ತನ್ನ ಹೆತ್ತವರಿಗೆ ತಿಳಿಸಿದ್ದು, ಡಿ.02ರಂದು ಆರೋಪಿಯ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ:114/2025, ಕಲಂ:11(1)(4),12 POCSO and 78 BNS ರಂತೆ ಪ್ರಕರಣ ದಾಖಲಾಗಿರುತ್ತದೆ. ಪ್ರಸ್ತುತ ಅರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!