Saturday, November 14, 2026
spot_imgspot_img
spot_imgspot_img

ಉಪ್ಪಿನಂಗಡಿ: ಸುಲಿಗೆ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಉಪ್ಪಿನಂಗಡಿ: ಕೌಕ್ರಾಡಿಯಲ್ಲಿ ವೈದ್ಯರ ಮನೆಗೆ ನುಗ್ಗಿ ಚಿನ್ನಾಭರಣ, ನಗದು ಸುಲಿಗೆ ಮಾಡಿದ್ದ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಜು. 26 ರಂದು ರಾತ್ರಿ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕೌಕ್ರಾಡಿಯಲ್ಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಶಿವಶಂಕರ್ ಶಾಸ್ತ್ರಿ ಅವರ ಮನೆಗೆ ಚಿಕಿತ್ಸೆ ಪಡೆಯುವ ನೆಪದಲ್ಲಿ ಬಂದಿದ್ದ 4 ಜನ ಅಪರಿಚಿತರು, ಮನೆಯಲ್ಲಿದ್ದ ಶಿವಶಂಕರ್ ಶಾಸ್ತ್ರಿ ಹಾಗೂ ಅವರ ಪತ್ನಿಯನ್ನು ಕಟ್ಟಿಹಾಕಿ ರೂ. 2,35,800 ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆ ಮಾಡಿದ್ದರು.ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 187/2006 ಕಲಂ 395, 397 ಐಪಿಸಿ ಅಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಚಿಕ್ಕಮಗಳೂರು ಮಾಗುಂಡಿ ನಿವಾಸಿ ಮಸೂದ್ @ ಮಸೂರ ಎಂಬಾತನನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಹೆಚ್.ಸಿ-325 ನಂಜುಂಡಯ್ಯ ಮತ್ತು ಪಿ.ಸಿ-1944 ಮ್ಯಾಥ್ಯು ವರ್ಗಿಸ್ ಅವರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!