Saturday, April 27, 2024
spot_imgspot_img
spot_imgspot_img

ಉಪ್ಪಿನಂಗಡಿ: ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿ ಅರೆಸ್ಟ್!

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಅಪ್ರಾಪ್ತೆ ಬಾಲಕಿಯನ್ನು ಕಾರಿನಲ್ಲಿ ಕೂರಿಸಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಎಂಬಲ್ಲಿ ನಡೆದಿದೆ.

ಆರೋಪಿ ಕೊಕ್ಕಡದ ನಿವಾಸಿ ರುಕ್ಮಯ್ಯ ಎಂಬಾತ ಮನೆಯಲ್ಲಿ ಯಾರೂ ಇರದ ಸಂದರ್ಭ ಕಾರಿನಲ್ಲಿ ಬಂದು ಬಾಲಕಿಯನ್ನು ಕಾರಿನಲ್ಲಿ ಬರಬೇಕು ಎಂದು ಬಲವಂತ ಮಾಡಿದ್ದಾನೆ. ಬಾಲಕಿ ಒಪ್ಪದಿದ್ದಾಗ ಕೊನೆಗೆ ಬೆದರಿಸಿ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿ ಲೈಂಗಿಕ ಹಿಂಸೆ ನೀಡಲು ಯತ್ನಿಸಿದ್ದು, ಈ ವೇಳೆ ಬಾಲಕಿ ಜೋರಾಗಿ ಕಿರುಚಿದಾಗ ಜೀವ ಬೆದರಿಕೆ ನೀಡಿ ಮನೆಗೆ ಕರೆತಂದು ಬಿಟ್ಟಿದ್ದಾನೆ.

ಬಾಲಕಿಯ ತಂದೆ ಈ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತ ಎಂದು ತಿಳಿದುಬಂದಿದೆ. ಈ ಮೊದಲು ಕೂಡ ಇಂತಹ ಪ್ರಕರಣಗಳು ಈತನ ಮೇಲೆ ದಾಖಲಾಗಿತ್ತು ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು, ಆರೋಪಿ ಕೊಕ್ಕಡ ನಿವಾಸಿ ರುಕ್ಮಯ್ಯ ಮಡಿವಾಳ ಎಂಬುವವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!