Monday, June 29, 2026
spot_imgspot_img
spot_imgspot_img

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ!

- Advertisement -
- Advertisement -

ಉಪ್ಪಿನಂಗಡಿ: ವ್ಯಕ್ತಿಯೋರ್ವ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕೂರಿಸಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಾಲಕಿ ಬೆಳ್ತಂಗಡಿ ತಾಲೂಕಿನ ಇಳಂತಿಲ ಸಮೀಪದವಳಾಗಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕೊಕ್ಕಡದ ನಿವಾಸಿಯೊಬ್ಬ ಕಾರಿನಲ್ಲಿ ಬಂದು ತನ್ನ ಕಾರಿನಲ್ಲಿ ಬರಬೇಕು ಎಂದು ಒತ್ತಾಯಿಸಿದ್ದು,ಅಲ್ಲದೇ ಬಾಲಕಿಯನ್ನು ಬೆದರಿಸಿ ಬಲವಂತವಾಗಿ ಕಾರಿನಲ್ಲಿ ಉಪ್ಪಿನಂಗಡಿ ಕಡೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಹಿಂಸೆ ನೀಡಲು ಯತ್ನಿಸಿದ್ದು, ಭಯಗೊಂಡ ಬಾಲಕಿ ಈ ವೇಳೆ ಜೋರಾಗಿ ಕಿರುಚಾಡಿದ್ದಾಳೆ. ಇದರಿಂದಾಗಿ ಆತ ಬಾಲಕಿಯನ್ನು ಮನೆಗೆ ಕರೆತಂದು ಬಿಟ್ಟಿದ್ದಾನೆ. ಅಲ್ಲದೆ, ಈ ಬಗ್ಗೆ ಯಾರಿಗೂ ಕೂಡ ಹೇಳದಂತೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!