Wednesday, July 22, 2026
spot_imgspot_img
spot_imgspot_img

ಉಪ್ಪಿನಂಗಡಿ: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ಇಬ್ಬರಿಗೆ ಗಾಯ- ಬಾಲಕಿ ಸಾವು

- Advertisement -
- Advertisement -

ಉಪ್ಪಿನಂಗಡಿ: ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದು 5 ವರ್ಷ ಪ್ರಾಯದ ಬಾಲಕಿ ಮೃತಪಟ್ಟು ಇತರೆ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಕಲ್ಲೇರಿ ಎಂಬಲ್ಲಿ ಸೋಮವಾರ ಸಂಭವಿಸಿದೆ.

ತಣ್ಣಿರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ ಇಸ್ಮಾಯಿಲ್ ಎಂಬವರು ತನ್ನ ಮಗಳು ಸಾಜಿರಾ ಮತ್ತು ಮೊಮ್ಮಗಳು ಸುಹೈರಾಳನ್ನು ಕುಳ್ಳಿರಿಸಿಕೊಂಡು ಕಲ್ಲೇರಿಯಿಂದ ಕುಪ್ಪೆಟ್ಟಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಎದುರುಗಡೆಯಿಂದ ಬಂದ ವೇಣೂರು ಮೂಲದ ಶಿವಪ್ರಸಾದ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಕಾರು ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಸುಹೈರಾ ಮತ್ತು ಆಕೆಯ ತಾಯಿ ಸಾಜಿರಾ(33), ವಾಹನ ಸವಾರ ಬಾಲಕಿಯ ಅಜ್ಜ ಇಸ್ಮಾಯಿಲ್(60) ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು.

ಗಂಭೀರವಾಗಿ ಗಾಯಗೊಂಡ ಸುಹೈರಾ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ರಾತ್ರಿ ಮೃತಪಟ್ಟಿದ್ದಾಳೆ ಪೊಲೀಸರು ತಿಳಿಸಿದ್ದು, ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!