Monday, October 26, 2026
spot_imgspot_img
spot_imgspot_img

ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ದಾಳಿ – ಮೂವರು ಬಂಧನ, ಐದು ಕೋಳಿಗಳು ವಶ

- Advertisement -
- Advertisement -

ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಜತ್ತೂರು ಗ್ರಾಮದ ಮಣಿಕ್ಕಳ ಎಂಬಲ್ಲಿ ಮಾ.3ರಂದು ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.


ಸುತೇಶ್ ಕೆ.ಪಿ., ಪೊಲೀಸ್ ಉಪನಿರೀಕ್ಷಕರು (ಕಾ&ಸು) ರವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ರಸ್ತೆ ಬದಿಯಲ್ಲಿ ಜೋರಾಗಿ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ಅಕ್ರಮ ಕೋಳಿ ಅಂಕ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ದಾಳಿ ನಡೆಸಿದಾಗ ಅಲ್ಲಿದ್ದ ಜನರು ಪರಾರಿಯಾಗಿದ್ದು, ಮೂರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಬಂಧಿತರನ್ನು ಕಡಬ ನಿವಾಸಿ ಸತೀಶ್‌ (38), ಬಂಟ್ವಾಳ ನಿವಾಸಿ ಮುರಳಿ (30) ಹಾಗೂ ಪುತ್ತೂರು ನಿವಾಸಿ ಮೋನಪ್ಪ ಕೆ (36) ಎಂದು ಗುರುತಿಸಲಾಗಿದೆ. ವಿಚಾರಣೆಯಲ್ಲಿ ದೇರಣ್ಣ ಮತ್ತು ಉಮೇಶ್‌ ಎಂಬವರು ಕೋಳಿ ಅಂಕ ನಡೆಸುತ್ತಿರುವುದು ತಿಳಿದುಬಂದಿದೆ.
ಸ್ಥಳದಿಂದ ಐದು ಹುಂಜ ಕೋಳಿಗಳು, ಎರಡು ಬಾಲುಗಳು (ಕೋಳಿಗಳ ಕಾಲಿಗೆ ಕಟ್ಟುವ ಸಣ್ಣ ಕತ್ತಿಗಳು), ಪಣವಾಗಿ ಇಟ್ಟಿದ್ದ ರೂ. 2,300 ನಗದು ಹಾಗೂ ಒಂದು ಮೋಟಾರ್ ಸೈಕಲ್ ವಶಪಡಿಸಿಕೊಳ್ಳಲಾಗಿದೆ.


ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 32/2026, ಕಲಂ 87, 93 ಕೆ.ಪಿ. ಅಕ್ಟ್ ಹಾಗೂ ಕಲಂ 11(1)(m)(ii), 11(1)(n) ಪ್ರಾಣಿ ಹಿಂಸೆ ನಿಷೇಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

- Advertisement -

Related news

error: Content is protected !!