


ಉಪ್ಪಿನಂಗಡಿ: ಕೌಟುಂಬಿಕ ಕಲಹದ ಹಿನ್ನಲೆ ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆಗೈದ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಝೀನತ್ (40) ಹಾಗೂ ಆರೋಪಿ ಪತಿ ರಫೀಕ್ (47) ಎಂದು ಗುರುತಿಸಲಾಗಿದೆ.
ಝೀನತ್ ಎಂಬವರಿಗೆ ರಫೀಕ್ ಎಂಬಾತನೊಂದಿಗೆ ಸುಮಾರು 18 ವರ್ಷದ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿರುತ್ತಾರೆ. ದಂಪತಿಗಳಿಗೆ ಕಳೆದ ಕೆಲವು ತಿಂಗಳುಗಳಿಂದ ವೈಮನಸ್ಸು ಉಂಟಾಗಿ ಕೌಟುಂಬಿಕ ಕಲಹ ನಡೆಯುತ್ತಿದ್ದು, ಜುಲೈ17.07.2025 ರಂದು ಬೆಳಿಗ್ಗೆ ಕೌಟುಂಬಿಕ ಕಲಹ ನಡೆದಾಗ ಆರೋಪಿ ರಫೀಕ್‌ನು ತನ್ನ ಪತ್ನಿ ಝೀನತ್ ಗೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ನಡೆಸಿರುತ್ತಾನೆ.
ಹಲ್ಲೆಯಿಂದ ಗಾಯಗೊಂಡಿದ್ದ ಝೀನತ್ ರವರನ್ನು ಸ್ಥಳೀಯರು ಹಾಗೂ ಸಂಬಂಧಿಕರು ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಕೆಯು ಮೃತಪಟ್ಟಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ: ಅ.ಕ್ರ 64/2025 ಕಲಂ: 103(1) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ.








