Saturday, June 13, 2026
spot_imgspot_img
spot_imgspot_img

ಉಪ್ಪಿನಂಗಡಿ: ಹಿಂದೂ ಕಾರ್ಯಕರ್ತನ ಮೀನಿನ ಅಂಗಡಿಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣ; ಆರೋಪಿಗಳ ಪತ್ತೆಗಾಗಿ ಹಿಂ.ಜಾ.ವೇ. ಯಿಂದ ಸೆ.6 ರಂದು ‘ಬೃಹತ್ ಧರಣಿ ಸತ್ಯಾಗ್ರಹ’

- Advertisement -
- Advertisement -

ಉಪ್ಪಿನಂಗಡಿ: ಹಳೆಗೇಟಿನಲ್ಲಿದ್ದ ಹಿಂದೂ ಕಾರ್ಯಕರ್ತನ ಮೀನಿನ ಅಂಗಡಿಗೆ ಕೆಲ ದಿನಗಳ ಹಿಂದೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದು, ಈ ಘಟನೆಯ ಆರೋಪಿಗಳನ್ನು ಇನ್ನೂ ಪತ್ತೆ ಹಚ್ಚದ ಕಾರಣ ನೈಜ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆಯೂ ಸೆ.6 ರಂದು ಉಪ್ಪಿನಂಗಡಿ ಠಾಣೆಯ ಮುಂಭಾಗ ಬೃಹತ್ ಧರಣಿ ಸತ್ಯಾಗ್ರಹವನ್ನು ನಡೆಸುವುದಾಗಿ ಕರೆ ನೀಡಿದೆ.

ಸೆ.6 ರಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಿಂದ ಹೊರಟು ಉಪ್ಪಿನಂಗಡಿ ಪೊಲೀಸ್ ಠಾಣೆಯವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಬಂದು ಉಪ್ಪಿನಂಗಡಿ ಪೊಲೀಸ್ ಠಾಣೆಯ ಮುಂಭಾಗ ಬೃಹತ್ ಧರಣಿ ಸತ್ಯಾಗ್ರಹ ನಡೆಸುವುದಾಗಿ ಹಿಂದೂ ಜಾಗರಣ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Related news

error: Content is protected !!