Friday, July 24, 2026
spot_imgspot_img
spot_imgspot_img

ಉಪ್ಪಿನಂಗಡಿ: ಎಂ.ಡಿ.ಎಂ.ಎ. ಸಹಿತ ವ್ಯಕ್ತಿ ಬಂಧನ!

- Advertisement -
- Advertisement -

49 ಸಾವಿರ ಮೌಲ್ಯದ ವಸ್ತುಗಳು ವಶ

ಉಪ್ಪಿನಂಗಡಿ: ಗ್ರಾಮದ ಪಂಜಳಲ್ಲಿ ಪೊಲೀಸರು ಸಂಜೆ 6 ಗಂಟೆಗೆ ರೌಂಡ್ಸ್ ನಡೆಸುವ ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ಯಹ್ಯಾ ಕೊಕ್ಕಡ (48) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಾದಕ ವಸ್ತು ಹೊಂದಿರುವುದು ಬೆಳಕಿಗೆ ಬಂದಿದೆ.

ಆತನು ಮಾರಾಟ ಉದ್ದೇಶದಿಂದ ಎಂ.ಡಿ.ಎಂ.ಎ. ಇಟ್ಟುಕೊಂಡಿದ್ದಾಗಿ ಒಪ್ಪಿಕೊಂಡಿದ್ದು, ಪಂಚರ ಸಮ್ಮುಖದಲ್ಲಿ ನಡೆಸಿದ ಮಹಜರಿನಲ್ಲಿ 2.16 ಗ್ರಾಂ ಎಂ.ಡಿ.ಎಂ.ಎ. (ಅಂದಾಜು ಮೌಲ್ಯ ₹3,000), ಒಂದು ಐಫೋನ್ (₹45,000) ಹಾಗೂ ಒಂದು ಸ್ಯಾಮ್ಸಂಗ್ ಕೀ-ಪ್ಯಾಡ್ ಮೊಬೈಲ್ (₹1,000) ಸೇರಿ ಒಟ್ಟು ₹49,000 ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ), 22(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಪೋಲಿಸ್ ಇಲಾಖೆಯಿಂದ ತಿಳಿದು ಬಂದಿದೆ.

- Advertisement -

Related news

error: Content is protected !!