- Advertisement -
- Advertisement -
ಉಪ್ಪಿನಂಗಡಿ: ಗ್ರಾಮ ಪಂಚಾಯತ್ ಸಿಬ್ಬಂದಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ಇಲ್ಲಿ ನಡೆದಿದೆ.
ಆತ್ನಹತ್ಯೆ ಮಾಡಿಕೊಂಡ ವ್ಯಕ್ತಿ ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ಪರಿಯೊಟ್ಟು ನಿವಾಸಿ, ಬಾರ್ಯ ಗ್ರಾಮ ಪಂಚಾಯತ್ ಸಿಬ್ಬಂದಿ ಗಣೇಶ್ ಯಾನೆ ಕುಶಾಲಪ್ಪ (38) ಎಂದು ಗುರುತಿಸಲಾಗಿದೆ.
ಎ.22 ರಂದು ತನ್ನ ಮನೆ ಸಮೀಪದ ಮರದ ಕೆಳಗೆ ವಿಷ ಸೇವಿಸಿ ಅಸ್ವಸ್ಥರಾಗಿದ್ದರು. ಚಿಕಿತ್ಸೆಗಾಗಿ ಇವರನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ಎ.23 ರಂದು ನಿಧನರಾದರು. ಗಣೇಶ್ ಯಾನೆ ಕುಶಾಲಪ್ಪ ಅವರು ಕಳೆದ 19 ವರ್ಷಗಳಿಂದ ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗಿಯಾಗಿದ್ದರು. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -