- Advertisement -
- Advertisement -

ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಬಾರ್ಯ ಗ್ರಾಮದ ಯುವತಿಯೊಬ್ಬಳು ನಾಪತ್ತೆಯಾಗಿದ್ದು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಾರ್ಯದ ಕುಡುಗುಡ್ಡೆ ಮನೆ ನಿವಾಸಿ ಅಬ್ದುಲ್ ಖಾದ್ರಿ ಎಂಬವರ ಮಗಳು ಸಾಹೀದಾ(19) ಎಂಬಾಕೆ ನ.19ರಂದು ಮಧ್ಯರಾತ್ರಿಯಿಂದ ನಾಪತ್ತೆಯಾಗಿರುವ ಯುವತಿ.
ತನ್ನ ಎಂಟು ಮಕ್ಕಳ ಪೈಕಿ ಐದು ಮಂದಿ ಹೆಣ್ಣು ಮಕ್ಕಳಾಗಿದ್ದು, ಇವರ ಪೈಕಿ ಕೊನೆಯವಳಾದ ಸಾಹೀದಾ ಶನಿವಾರ ರಾತ್ರಿ ಊಟ ಮಾಡಿ ಮಲಗಿದಾಕೆ ತಡ ರಾತ್ರಿ 1 ಗಂಟೆ ಸುಮಾರಿಗೆ ಎದ್ದು ನೋಡಿದಾಗ ನಾಪತ್ತೆಯಾಗಿರುವುದು ಕಂಡು ಬಂದಿರುತ್ತದೆ. ಈಕೆಗೆ ಕಳೆಂಜಿಬೈಲಿನ ಮುದಾಸೀರ್ ಎಂಬಾತನೊಂದಿಗೆ ಮೊಬೈಲ್ ಸಂಪರ್ಕ ಇದ್ದು , ಆತನೊಂದಿಗೆ ಹೋಗಿರುವ ಸಂಶಯವಿದೆ ಎಂದು ಅಬ್ದುಲ್ ಖಾದ್ರಿಯವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ನಾಪತ್ತೆಯಾದ ಯುವತಿಯು ಎಲ್ಲಿಯಾದರೂ ಪತ್ತೆಯಾದರೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಿದ್ದಾರೆ.
- ತೆಲಂಗಾಣ: ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ಎರಡು ನವಜಾತ ಶಿಶುಗಳ ದುರ್ಮರಣ, 28 ಮಕ್ಕಳ ರಕ್ಷಣೆ
- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 28 ಕೋಟಿ ರೂ. ಮೌಲ್ಯದ ಗಾಂಜಾ, 1.75 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ
- ಶ್ರೀ ದೇವತಾ ಸಮಿತಿ ವಿಟ್ಲ ಇದರ 55ನೇ ವರ್ಷದ ವಿಟ್ಲ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
- ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ – ದಂಪತಿ ಸ್ಥಳದಲ್ಲೇ ಸಾವು
- ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ – ರಜೆ ಮೇಲೆ ಊರಿಗೆ ಬಂದಿದ್ದ ಐಟಿಬಿಪಿ ಯೋಧ ಸಾವು

- Advertisement -








