Sunday, June 7, 2026
spot_imgspot_img
spot_imgspot_img

ಉಪ್ಪಿನಂಗಡಿ: ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣ: ಆರೋಪಿಯ ವಿರುದ್ಧ ಕೇಸು ದಾಖಲು!

- Advertisement -
- Advertisement -

ಉಪ್ಪಿನಂಗಡಿ: ಮಾನಸಿಕ ಅಸ್ವಸ್ಥೆಯೋರ್ವರ ಮೇಲೆ ಅತ್ಯಾಚಾರ ನಡೆಸಿ, ಅವರನ್ನು ಗರ್ಭಿಣಿಯಾಗಿಸಿರುವ ಪ್ರಕರಣವೊಂದು ಉಪ್ಪಿನಂಗಡಿಯಲ್ಲಿ ನಡೆದಿದ್ದು ಈ ಬಗ್ಗೆ ಆಕೆಯ ತಾಯಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಉಪ್ಪಿನಂಗಡಿಯ ನೆಕ್ಕಿಲಾಡಿಯ ಭೀತಲಪ್ಪು ಪಕ್ಕ ಬಾಡಿಗೆ ಮನೆಯೊಂದರಲ್ಲಿ ತಾಯಿ ಮತ್ತು ಮಗಳು ಕಳೆದ ಒಂದು ವರ್ಷದಿಂದ ವಾಸ್ತವ್ಯವಿದ್ದು, ಇವರ 44ರ ಹರೆಯದ ಮಗಳು ಮಾನಸಿಕ ಅಸ್ವಸ್ಥೆಯಾಗಿದ್ದು, ಇವರ ಪತಿ ಗುಜರಾತ್‌ನಲ್ಲಿದ್ದಾರೆ.

ಕಳೆದ ಮೇ 12ರಂದು ಇವರ ಮನೆಗೆ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ರೂಟೀನ್ ಭೇಟಿ ನೀಡಿದ್ದರು. ಈ ಸಂದರ್ಭ ಸಂಶಯ ಬಂದ ಸಿಬ್ಬಂದಿ ಅವರನ್ನು ಸ್ಕ್ಯಾನಿಂಗ್ ಮಾಡಿಸಲು ತಿಳಿಸಿದಾಗ ಈಕೆ ಏಳು ತಿಂಗಳ ಗರ್ಭಿಣಿಯೆಂದು ತಿಳಿದು ಬಂದಿದೆ.

ಬಳಿಕ ಹಿತೈಷಿಗಳ ಮತ್ತು ಸಿಬ್ಬಂದಿಗಳ ಸಲಹೆಯ ಮೇರೆಗೆ ಈಕೆಯ ತಾಯಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನಲ್ಲಿ ತನ್ನ ಮಗಳ ಮೇಲೆ ದರ್ಬೆ ಸುರೇಶ್ ಪ್ರಭು ಎಂಬಾತ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿರುವುದಾಗಿ ಆಕೆ ಆರೋಪಿಸಿದ್ದಾರೆ. ಈಗ ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ತಲೆ ಮರೆಸಿಕೊಂಡ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

- Advertisement -

Related news

error: Content is protected !!