- Advertisement -
- Advertisement -
ಉಪ್ಪಿನಂಗಡಿ:-ಈಚರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರ ಮೃತಪಟ್ಟು ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪ ಮಠ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.
ಅಪಘಾತದಲ್ಲಿ ಉಪ್ಪಿನಂಗಡಿ ನಟ್ಟಿಬೈಲು ನಿವಾಸಿ ಗಣೇಶ್ (23) ಎಂಬವರು ಮೃತಪಟ್ಟಿದ್ದಾರೆ ಮತ್ತು ಪುತ್ತೂರಿನ ಪುರುಷರಕಟ್ಟೆ ನಿವಾಸಿ ನವೀನ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಣೇಶ್ ಮತ್ತು ನವೀನ್ ಬೈಕಿನಲ್ಲಿ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದಾಗ ,ಹಾಸನ ಕಡೆಯಿಂದ ಮಂಗಳೂರಿಗೆ ತರಕಾರಿ ಸಾಗಾಟ ನಡೆಸುತ್ತಿದ್ದ ಲಾರಿಯು ಮಠ ಎಂಬಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದು , ಗಂಭೀರ ಗಾಯಗೊಂಡಿದ್ದ ಗಣೇಶ್ ಅವರನ್ನು ಅಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ. ನವೀನ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -