Sunday, May 19, 2024
spot_imgspot_img
spot_imgspot_img

ಯುಎಸ್​ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೇಮ್ಸ್ ಆಸ್ಟಿನ್ ಭಾರತಕ್ಕೆ ಭೇಟಿ- ಪ್ರಧಾನಿ ಮೋದಿಯೊಂದಿಗೆ ಮಾತುಕತೆ

- Advertisement -G L Acharya panikkar
- Advertisement -

ನವದೆಹಲಿ: ಯುಎಸ್​ ರಕ್ಷಣಾ ಇಲಾಖೆಯ ಕಾರ್ಯದರ್ಶಿ ಲಾಯ್ಡ್ ಜೇಮ್ಸ್ ಆಸ್ಟಿನ್ ಮಾ.19ರಂದು ಭಾರತಕ್ಕೆ ಭೇಟಿ ನೀಡಿ, ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ ಯುಎಸ್​ ಅಧ್ಯಕ್ಷ ಜೋ ಬೈಡೆನ್ ರವರಿಗೆ ಶುಭಾಶಯ ತಿಳಿಸಿದ್ದಾರೆ. ಈ ವೇಳೆ ಎರಡೂ ದೇಶಗಳ ನಡುವಿನ ರಕ್ಷಣಾ ಒಪ್ಪಂದ ಮತ್ತಷ್ಟು ಬಲಗೊಂಡು ಮುಂದುವರೆಯಲಿದೆ. ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಮತ್ತು ಅದರಾಚೆಗೂ ಶಾಂತಿ, ಸ್ಥಿರತೆ ಮತ್ತು ಸಮೃಧ್ಧಿಗಾಗಿ ಕಾರ್ಯತಂತ್ರದ ಸಹಭಾಗಿತ್ವವನ್ನು ಮತ್ತಷ್ಟು ಹೆಚ್ಚಿಸುವ ಅಮೆರಿಕಾದ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ.

ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಮತ್ತು ಅದರಾಚೆ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗಾಗಿ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಹೆಚ್ಚಿಸುವ ಅಮೆರಿಕದ ಬಲವಾದ ಬಯಕೆಯನ್ನು ಅವರು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮೋದಿ ಭೇಟಿ ನಂತರ ಆಸ್ಟಿನ್ ಭದ್ರತಾ ಸಲಹೆಗಾರ ಅಜಿತ್ ಧೋವಲ್ ರವರನ್ನೂ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಲಾಯ್ಡ್ ಆಸ್ಟಿನ್ ಮೂರು ದಿನಗಳ ಭಾರತದ ಪ್ರವಾಸದಲ್ಲಿದ್ದಾರೆ.

- Advertisement -

Related news

error: Content is protected !!