Thursday, May 16, 2024
spot_imgspot_img
spot_imgspot_img

ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪೆಟ್ರೋಲ್ ಬಳಕೆ – ವಿದ್ಯಾರ್ಥಿಗೆ ತಗುಲಿದ ಬೆಂಕಿ

- Advertisement -G L Acharya panikkar
- Advertisement -

ಪ್ರತಿಭಾ ಕಾರಂಜಿ ಕಾರ್ಯಕ್ರಮ ವೇಳೆ ವಿದ್ಯಾರ್ಥಿ ಮೇಲೆ ಪೆಟ್ರೋಲ್ ಬಿದ್ದು ಸುಟ್ಟ ಗಾಯಗಳಾಗಿರುವ ಘಟನೆ ರಾಮನಗರ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ನಡೆದಿದೆ.

ಲಕ್ಷ್ಮೀಪುರ ಫ್ರೌಡಶಾಲೆಯಲ್ಲಿ ನಡೆಯುತ್ತಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವೀರಗಾಸೆ ನೃತ್ಯ ಪ್ರದರ್ಶನ ಮಾಡಲಾಗುತ್ತಿದ್ದು, ಈ ವೇಳೆ ರಂಗೋಲಿ ಮೇಲೆ ಪೆಟ್ರೋಲ್ ಹಾಕಲು ಹೋಗಿ ವಿದ್ಯಾರ್ಥಿಗೆ ಬೆಂಕಿ ತಗುಲಿದೆ.


5ನೇ ತರಗತಿ ವಿದ್ಯಾರ್ಥಿ ಪ್ರೀತಮ್‌ಗೆ ಕಣ್ಣು, ಮುಖ ಹಾಗೂ ತಲೆ ಭಾಗಕ್ಕೆ ಸುಟ್ಟ ಗಾಯಗಳಾಗಿದ್ದು, ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಹಾಗೂ ಬಾಲಕ ಅಪಾಯದಿಂದ ಪಾರಾಗಿದ್ದಾನೆ. ಶಿಕ್ಷಕರ ನಿರ್ಲಕ್ಷ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಯಕ್ರಮದಲ್ಲಿ ಪೆಟ್ರೋಲ್ ಬಳಕೆ ಮಾಡಿದ್ದು ಸರಿಯಿಲ್ಲ, ಯಾವುದೇ ಮುನ್ನೆಚ್ಚರಿಕೆ ತೆಗೆದುಕೊಳ್ಳದೇ ಪೆಟ್ರೋಲ್ ಬಳಸಿದ್ದೇ ಅನಾಹುತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮವಹಿಸುವಂತೆ ಒತ್ತಾಯಿಸಿದ್ದಾರೆ.

- Advertisement -

Related news

error: Content is protected !!