Monday, April 29, 2024
spot_imgspot_img
spot_imgspot_img

ತುಳಸಿ ಎಲೆಯ ಉಪಯೋಗ

- Advertisement -G L Acharya panikkar
- Advertisement -

ಇತ್ತೀಚಿನ ದಿನಗಳಲ್ಲಿ ನಮ್ಮ ಆಹಾರ ಪದ್ಧತಿಯಲ್ಲಿ ಭಾರಿ ಬದಲಾವಣೆಯಾಗಿದೆ. ಕರಿದ ಮತ್ತು ಮಸಾಲೆಯುಕ್ತ ಆಹಾರಗಳ ಬಳಕೆ ಹೆಚ್ಚಾಗಿದೆ. ಅಲ್ಲದೆ, ನೀರು ಅಥವಾ ದ್ರವ ಪದಾರ್ಥಗಳ ಸೇವನೆಯನ್ನು ಕಡಿಮೆ ಮಾಡುವುದು, ಸಮಯಕ್ಕೆ ಊಟ ಮಾಡದಿರುವುದು ಮತ್ತು ತಡರಾತ್ರಿಯಲ್ಲಿ ತಿನ್ನುವುದು ಮಲಬದ್ಧತೆಗೆ ಕಾರಣವಾಗಬಹುದು. ಅನೇಕ ಜನರು ಈ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ.

ತುಳಸಿ ಎಲೆಗಳು ಇದಕ್ಕೆ ಮನೆಮದ್ದು. ತುಳಸಿ ಎಲೆಗಳನ್ನು ಪ್ರತಿದಿನ ಸೇವಿಸುವುದರಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ತುಳಸಿ ಎಲೆಗಳು ಆಗಾಗ ಅತಿಸಾರವನ್ನು ತಡೆಯಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸಲು ತುಳಸಿ ಎಲೆಗಳನ್ನು ಪ್ರತಿದಿನ ಸೇವಿಸಬೇಕು.

ಬಾಯಿ ದುರ್ವಾಸನೆಯಿಂದ ಕೂಡಿದ್ರೆ ತುಳಸಿ ಎಲೆ ಅತ್ಯುತ್ತಮ ಮನೆಮದ್ದು ಏಕೆಂದರೆ ಇದರ ಎಲೆಗಳಲ್ಲಿ ಬ್ಯಾಕ್ಟಿರಿಯಾ ವಿರೋಧಿ ಗುಣವಿದ್ದು, ಈ ಎಲೆಗಳನ್ನು ಸೇವಿಸುವುದರಿಂದ ಬಾಯಿಯ ಕೆಟ್ಟ ವಾಸನೆಯನ್ನು ದೂರ ಮಾಡಬಹುದು. ತುಳಸಿ ಗಿಡದಲ್ಲಿ ಅನೇಕ ಔಷಧೀಯ ಗುಣಗಳಿದ್ದು ಇದನ್ನು ಪ್ರತಿನಿತ್ಯ ಸೇವಿಸುವುದರಿಂದ ಹಲವು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

ಪರಿಸರದಲ್ಲಿನ ಬದಲಾವಣೆಯಿಂದಾಗಿ, ಸಾಮಾನ್ಯವಾಗಿ ಎಲ್ಲರಿಗೂ ಯಾವಾಗಲೂ ಶೀತ ಮತ್ತು ಕೆಮ್ಮು ಉಂಟಾಗುತ್ತದೆ. ಜೊತೆಗೆ ತಲೆ ನೋವು ಸಹ ಬರುತ್ತದೆ. ಇದರ ಚಿಕಿತ್ಸೆಗಾಗಿ ಔಷಧಿ ಮತ್ತು ಮಾತ್ರೆಗಳನ್ನು ತೆಗೆದುಕೊಳ್ಳುವ ಬದಲು, ತುಳಸಿ ಎಲೆಗಳನ್ನು ಚಹಾ ಅಥವಾ ಕಷಾಯವನ್ನು ಮಾಡಿ, ಸೇವಿಸುವುದರಿಂದ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ತುಳಸಿ ಎಲೆಗಳು ಶೀತ, ಕೆಮ್ಮಿನ ಚಿಕಿತ್ಸೆಯಲ್ಲಿ ಬಹಳ ಪ್ರಯೋಜನಕಾರಿಯಾಗಿದೆ.

ಪ್ರತಿನಿತ್ಯ ತುಳಸಿ ಎಲೆಯನ್ನು ಸೇವಿಸಿದ್ರೆ ಅಥವಾ ನೀರಿನಲ್ಲಿ ಹಾಕಿ ಕುಡಿದ್ರೆ ಹಲವು ಆರೋಗ್ಯಕರ ಲಾಭಗಳನ್ನು ಪಡೆಯಬಹುದು. ಇದು ಮುಖ್ಯವಾಗಿ ನಮ್ಮ ದೇಹದ ಪ್ರತಿರೋಧಕ ವ್ಯವಸ್ಥೆಯನ್ನು ಬಲಪಡಿಸುತ್ತದೆ.

ತುಳಸಿಯಲ್ಲಿ ಅಂಟಿ ಆಕ್ಸಿಡೆಂಟ್ಸ್ ಅಂಶಗಳು ಸಮೃದ್ದವಾಗಿರುವುದರಿಂದ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಎಲ್ಲಾ ರೋಗಗಳ ವಿರುದ್ಧ ಹೋರಾಡುತ್ತದೆ.
ಪ್ರತಿದಿನ ಖಾಲಿ ಹುದ್ದೆಯಲ್ಲಿ ತುಳಸಿ ಎಲೆಯನ್ನು ಸೇವಿಸಿದ್ರೆ ಜೀರ್ಣಕ್ರಿಯೆ ಕೂಡ ಸುಗಮಗೊಳ್ಳುತ್ತದೆ.

- Advertisement -

Related news

error: Content is protected !!