Friday, April 19, 2024
spot_imgspot_img
spot_imgspot_img

ವಿಶ್ವದ ಅತಿ ವೇಗದ ಓಟಗಾರ ಉಸೈನ್ ಬೋಲ್ಟ್‌ಗೆ ಕೊರೊನಾ ಸೋಂಕು.

- Advertisement -G L Acharya panikkar
- Advertisement -

ಲಂಡನ್: ವಿಶ್ವದ ಅತೀ ವೇಗದ ಓಟಗಾರ, ಒಲಿಂಪಿಕ್‍ನಲ್ಲಿ 8 ಬಾರಿ ಚಿನ್ನದ ಪದಕ ತನ್ನದಾಗಿಸಿಕೊಂಡಿರುವ ಉಸೈನ್ ಬೋಲ್ಟ್‌ಗೆ ತನ್ನ 34ನೇ ಹುಟ್ಟುಹಬ್ಬ ಆಚರಿಸಿಕೊಂಡ ಕೆಲವೇ ದಿನಗಳ ಬಳಿಕ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ.


ಈ ಕುರಿತು ಸ್ವತಃ ಬೋಲ್ಟ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ನನಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ಶನಿವಾರ ನಾನು ಪರೀಕ್ಷೆ ಮಾಡಿಸಿದ್ದೆ. ಆದರೂ ಸುರಕ್ಷಿತವಾಗಿರಲು ಸ್ವಯಂ ಕ್ವಾರಂಟೈನ್‌ಗೆ ಒಳಪಟ್ಟಿರುವುದಾಗಿ ಹೇಳಿಕೊಂಡಿದ್ದರು. ಆದರೆ, ಅವರ ವರದಿ ಪಾಸಿಟಿವ್‌ ಬಂದಿರುವುದಾಗಿ ಜಮೈಕಾದ ಆರೋಗ್ಯ ಸಚಿವಾಲಯ ಖಚಿತಪಡಿಸಿದೆ.


ಅಲ್ಲದೆ ಆರೋಗ್ಯ ಸಚಿವಾಲಯದ ನಿಯಮದ ಪ್ರಕಾರ ನಾನು ಹೇಗೆ ಇತರರಿಂದ ದೂರ ಇರಬಹುದು ಎಂಬುದನ್ನು ತಿಳಿಯುತ್ತೇನೆ. ಸದ್ಯ ಸುರಕ್ಷತೆ ದೃಷ್ಟಿಯಿಂದ ನಾನು ಪ್ರತ್ಯೇಕವಾಗಿದ್ದೇನೆ. ಅಲ್ಲದೆ ಕೊರೊನಾ ವೈರಸ್‍ನ್ನು ಸುಲಭವಾಗಿ ತೆಗೆದುಕೊಂಡಿದ್ದೇನೆ. ನೀವು ಸುರಕ್ಷಿತವಾಗಿರಿ, ಆಲ್‍ರೈಟ್ ಕೂಲ್ ಎಂದು ಟ್ವಿಟ್ಟರ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

- Advertisement -

Related news

error: Content is protected !!