Wednesday, May 1, 2024
spot_imgspot_img
spot_imgspot_img

ಇಷ್ಟಾರ್ಥ ಸಿದ್ಧಿಗಾಗಿ ಪಣೋಲಿಬೈಲಿನಲ್ಲಿ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್ – ಮುಸ್ಲಿಂ ಮುಖಂಡರೋರ್ವರ ಆಕ್ರೋಶದ ಪೋಸ್ಟ್‌!!!

- Advertisement -G L Acharya panikkar
- Advertisement -

ಮಂಗಳೂರು: ಇಷ್ಟಾರ್ಥ ಸಿದ್ಧಿಗಾಗಿ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಶ್ರೀ ಕ್ಷೇತ್ರ ಪಣೋಲಿಬೈಲ್‌ನಲ್ಲಿ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದು, ಇದೀಗ ಮುಸ್ಲಿಂ ಮುಖಂಡರೋರ್ವರು ವಿರೋಧ ವ್ಯಕ್ತಪಡಿಸಿದ್ದಾರೆ.
ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದ ಖಾದರ್ ಪ್ರದಾಯ ಬದ್ಧವಾಗಿ ಕೋಲ ನೆರವೇರಿಸಿ ಕಲ್ಲುರ್ಟಿ-ಕಲ್ಕುಡ ದೈವಗಳ ಆಶೀರ್ವಾದ ಪಡೆದಿದ್ದರು..

ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಎಂಬುವವರು ಯು.ಟಿ. ಖಾದರ್ ಬಗ್ಗೆ ಆಕ್ಷೇಪಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಕೊರಗಜ್ಜನ ಭಕ್ತ ಯು.ಟಿ ಖಾದರ್ ನನ್ನು ಮುಸ್ಲಿಮರು ಬರೀ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಖಂಡರಾಗಿ ಕಾಣುವುದು ಬೇಡ. ಉಲೆಮಾ, ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಮುಸ್ಲಿಂ ನಾಯಕನಾಗಿ ಹತ್ತಿಸುವುದು ತರವಲ್ಲ. ಅದು ಆತನ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾಗಿತ್ತೆ. ಖಾದರ್ ಕೊರಗಜ್ಜನಿಗೂ ಕಲ್ಲುರ್ಟಿ, ಪಂಜುರ್ಲಿಗೂ ಆರಾಧಿಸಲಿ. ಪ್ರಸಾದ ಪಡೆದು ತಲೆಗೆ ಮೆತ್ತಿಕೊಂಡು ನರಕಕ್ಕೆ ಹೋಗಲಿ. ಅದು ಆತನ ವೈಯಕ್ತಿಕ ಸ್ವತಂತ್ರ. ಅದು ಭಾರತದಲ್ಲಿ ಎಲ್ಲರಿಗೂ ಇರುವ ಸಂವಿಧಾನಿಕ ಸ್ವಾತಂತ್ರ. ಅದನ್ನು ತಡೆಯುವ ಹಕ್ಕು ನನಗಿಲ್ಲ. ಆದರೆ ಧಾರ್ಮಿಕ ನಾಯಕನಾಗಿ ನಾವು ಅಂಗೀಕರಿಸುವುದು, ಆತನ ಭೂತಾರಾಧನೆಯನ್ನು ನಾವು ಒಪ್ಪಿಕೊಂಡಂತಾಗುತ್ತದೆ. ಉಲಮಾಗಳು ಅವನಿಗೆ ಗೌರವ ಕೊಡುವುದು ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಸಂದೇಶವಾಗಿ ಪರಿಣಮಿಸುತ್ತದೆ ಎಂದು ಯು.ಟಿ.ಖಾದರ್ ನಡವಳಿಕೆ ಆಕ್ಷೇಪಿಸಿ ಸಾಲೆತ್ತೂರು ಫೈಝಿ ಪೋಸ್ಟ್ ಹಂಚಿಕೊಂಡಿದ್ದಾರೆ.

- Advertisement -

Related news

error: Content is protected !!