- Advertisement -
- Advertisement -
ಕರ್ನಾಟಕದ ಮಲೆನಾಡು, ಕರಾವಳಿಯಲ್ಲಿ ಕಳೆದೊಂದು ವಾರದಿಂದ ಮಳೆ ಕಡಿಮೆಯಾಗಿತ್ತು. ಆದರೆ, ಇಂದು ಮತ್ತು ನಾಳೆ ಉತ್ತರ ಕರ್ನಾಟಕ ಮತ್ತು ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಹಾಗೇ, ಅಕ್ಟೋಬರ್ 1ರಿಂದ 3ರವರೆಗೆ ಸಾಧಾರಣ ಮಳೆಯಾಗಲಿದೆ.
ಇಂದು ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಬೆಂಗಳೂರು, ಕೋಲಾರ, ಬಳ್ಳಾರಿಯಲ್ಲಿ ಇಂದು ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಅಕ್ಟೋಬರ್ 1ರವರೆಗೆ ಸಾಧಾರಣ ಮಳೆಯಾಗಲಿದೆ. ಬಳ್ಳಾರಿಯಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ, ಕೊಡಗಿನ ಮಳೆ ಈಗ ಉತ್ತರ ಕರ್ನಾಟಕದತ್ತ ಸಾಗಿದೆ.
- Advertisement -