Friday, April 26, 2024
spot_imgspot_img
spot_imgspot_img

ಉತ್ತರ ಪ್ರದೇಶದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ – ಯುವತಿ ಸಾವು

- Advertisement -G L Acharya panikkar
- Advertisement -

ಉತ್ತರ ಪ್ರದೇಶ: ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 19 ವರ್ಷದ ದಲಿತ ಯುವತಿ ಚಿಕಿತ್ಸೆ ಫಲಕಾರಿಯಾಗದೆ 2 ದಿನಗಳ ಹಿಂದೆ ಸಾವನ್ನಪ್ಪಿದ್ದಳು. ಆ ಪ್ರಕರಣದ ಬಗ್ಗೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಉತ್ತರ ಪ್ರದೇಶ ಸರ್ಕಾರ ಎಸ್​ಐಟಿ ತನಿಖೆಗೆ ವಹಿಸಿತ್ತು. ಆಕೆ ಸಾವನ್ನಪ್ಪಿದ ದಿನವೇ ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿದ್ದು, ಚಿಕಿತ್ಸೆ ಫಲಕಾರಿಯಾಗದೆ ದಲಿತ ಯುವತಿ ಸಾವನ್ನಪ್ಪಿದ್ದಾಳೆ.

ಬಲರಾಂಪುರ ಜಿಲ್ಲೆಯ 22 ವರ್ಷದ ದಲಿತ ಯುವತಿಯ ಮೇಲೆ ಮಂಗಳವಾರ ಇಬ್ಬರು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ಆಕೆ ಬಲಾಂಪುರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಇಬ್ಬರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಮಂಗಳವಾರ ಕೆಲಸಕ್ಕೆ ಹೋಗಿದ್ದ ಯುವತಿ ಸಂಜೆ ವಾಪಾಸ್ ಬರಲಿಲ್ಲ. ಆಕೆಯ ಫೋನ್​ಗೆ ಎಷ್ಟು ಬಾರಿ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಆಕೆಯ ಬಗ್ಗೆ ಯಾವುದೇ ಮಾಹಿತಿ ಸಿಗದಿದ್ದಾಗ ಅವರು ಕಂಗಾಲಾಗಿದ್ದರು.

ಇನ್ನೇನು ಪೊಲೀಸ್ ಠಾಣೆಗೆ ದೂರು ನೀಡಬೇಕು ಎನ್ನುವಷ್ಟರಲ್ಲಿ ರಾತ್ರಿ ಆಟೋ ರಿಕ್ಷಾದಲ್ಲಿ ಮನೆಗೆ ಬಂದ ಯುವತಿಯ ಮೈಮೇಲೆ ಗಾಯಗಳಾಗಿತ್ತು. ಆಕೆ ನಿಲ್ಲಲೂ ಆಗದಷ್ಟು ನಿತ್ರಾಣಳಾಗಿದ್ದಳು. ಆಕೆಯ ಕೈಗೆ ಗ್ಲೂಕೋಸ್​ ಡ್ರಿಪ್ ಹಾಕಿದ್ದ ಇಂಜೆಕ್ಷನ್ ಹಾಕಲಾಗಿತ್ತು. ಆಕೆಯ ಮನೆಯವರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಆಕೆ ಪ್ರಾಣ ಬಿಟ್ಟಳು ಎಂದು ಯುವತಿಯ ಮನೆಯವರು ದೂರು ನೀಡಿದ್ದಾರೆ. ಆಕೆಯ ಕುಟುಂಬಸ್ಥರು ನೀಡಿದ ದೂರಿನ ಆಧಾರದಲ್ಲಿ ಇಬ್ಬರು ಯುವಕರನ್ನು ಬಂಧಿಸಲಾಗಿದೆ.

- Advertisement -

Related news

error: Content is protected !!