Friday, April 26, 2024
spot_imgspot_img
spot_imgspot_img

ಮಧ್ಯಪ್ರದೇಶದ ಬಳಿಕ ಉತ್ತರ ಪ್ರದೇಶದಲ್ಲೂ ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ರಚನೆ ಕುರಿತು ಪ್ರಸ್ತಾವನೆ ಸಲ್ಲಿಕೆ

- Advertisement -G L Acharya panikkar
- Advertisement -

ಲಕ್ನೋ : ಮಧ್ಯಪ್ರದೇಶದ ಬಳಿಕ ಇದೀಗ ‘ಲವ್ ಜಿಹಾದ್ ‘ ವಿರುದ್ಧ ಕಠಿಣ ಕಾನೂನು ರಚನೆ ಕುರಿತು ಉತ್ತರ ಪ್ರದೇಶ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ.


ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ವಿರುದ್ಧದ ಕಠಿಣ ಕಾನೂನನ್ನು ಶೀಘ್ರದಲ್ಲೇ ತರಲಾಗುವುದು. ಈ ವಿಚಾರವಾಗಿ ಉತ್ತರ ಪ್ರದೇಶದ ಗೃಹ ಇಲಾಖೆಯು ಅಲ್ಲಿನ ಕಾನೂನು ಇಲಾಖೆಗೆ ಪ್ರಸ್ತಾವನೆ ಕಳುಹಿಸಿದೆ.
ಲವ್ ಜಿಹಾದ್ ಪ್ರಕರಣಗಳ ಕಡಿವಾಣಕ್ಕೆ ಕಾಯ್ದೆ ರೂಪಿಸಲು ಮಧ್ಯಪ್ರದೇಶದ ಬಿಜೆಪಿ ನೇತೃತ್ವದ ಸರ್ಕಾರ ಮಂಗಳವಾರ ತೀರ್ಮಾನಿಸಿತ್ತು.


ಮಧ್ಯ ಪ್ರದೇಶದಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 15 ದಿನದಲ್ಲೇ ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ಜಾರಿಗೆ ತರುವ ಸುಳಿವು ನೀಡಿದ್ದ ಶಿವರಾಜ್ ಸಿಂಗ್ ಚೌಹಾಣ್ ಅವರು, ವಿವಾಹದ ಕಾರಣಕ್ಕಾಗಿ ನಡೆಯುವ ಧಾರ್ಮಿಕ ಮತಾಂತರ ನಿಷೇಧಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸುವುದಾಗಿ ಮಂಗಳವಾರ ಹೇಳಿದ್ದಾರೆ.

- Advertisement -

Related news

error: Content is protected !!