Friday, April 19, 2024
spot_imgspot_img
spot_imgspot_img

ಉತ್ತರಪ್ರದೇಶ ಹತ್ರಾಸ್ ಸಾಮೂಹಿಕ ಅತ್ಯಾಚಾರ ತನಿಖೆ-ಅಲಹಾಬಾದ್ ಹೈಕೋರ್ಟ್ ಮೇಲ್ನೋಟ

- Advertisement -G L Acharya panikkar
- Advertisement -

ನವದೆಹಲಿ(ಅ.27): ಉತ್ತರಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಸಾವಿನ ಕುರಿತ ಯ ಎಲ್ಲ ಆಯಾಮಗಳ ಬಗ್ಗೆ ಅಲಹಾಬಾದ್ ಹೈಕೋರ್ಟ್ ಮೇಲ್ನೋಟ ವಹಿಸಲಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೋಬ್ಡೆ ನೇತೃತ್ವದ ಪೀಠ ಈ ಆದೇಶ ನೀಡಿದೆ.

ಅಲಹಾಬಾದ್ ಹೈಕೋರ್ಟ್ ಅರ್ಜಿ ವಿಚಾರಣೆಯ ಎಲ್ಲ ಅಂಶಗಳ ಬಗ್ಗೆ ಗಮನ ಹರಿಸಲಿದೆ. ಸಿಬಿಐ ತನಿಖಾ ಪ್ರಗತಿ ವರದಿ ಕೂಡ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಮೃತಪಟ್ಟ ಯುವತಿಯ ಪೋಷಕರ ಸುರಕ್ಷತೆ ಖಾತರಿ ಸೇರಿದಂತೆ ಎಲ್ಲದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ಪರಿಗಣಿಸಲಿದೆ ಎಂದು ಮುಖ್ಯ ನ್ಯಾಯಮೂರ್ತಿ ಬೋಬ್ಡೆ ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ.

ವಿಚಾರಣೆಯನ್ನು ಉತ್ತರಪ್ರದೇಶದ ಹೊರಗಡೆಗೆ ಸ್ಥಳಾಂತರಿಸಬೇಕೆಂಬ ಬೇಡಿಕೆಯನ್ನು ಮುಂದಿನ ದಿನಗಳಲ್ಲಿ ಪರಿಗಣಿಸುವುದಾಗಿ ಸರ್ವೋಚ್ಚ ನ್ಯಾಯಾಲಯ ತಿಳಿಸಿದೆ.

- Advertisement -

Related news

error: Content is protected !!