- Advertisement -
- Advertisement -
ನವದೆಹಲಿ(ಅ.27): ಉತ್ತರಪ್ರದೇಶದ ಹತ್ರಾಸ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡುವ ಸಾಧ್ಯತೆಯಿದೆ. ಪ್ರಕರಣದ ತನಿಖೆ ಸುಪ್ರೀಂಕೋರ್ಟ್ ಉಸ್ತುವಾರಿಯಲ್ಲಿ ನಡೆಯಬೇಕು ಎಂದು ಮೃತ ಯುವತಿಯ ಪೋಷಕರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಅತ್ಯಾಚಾರ ಪ್ರಕರಣದ ತನಿಖೆಯನ್ನು ಉತ್ತರಪ್ರದೇಶ ಸರ್ಕಾರ ಈಗಾಗಲೇ ಸಿಬಿಐ ಗೆ ಹಸ್ತಾಂತರಿಸಿದೆ. ಆದರೆ ಕೇಂದ್ರೀಯ ತನಿಖಾ ಸಂಸ್ಥೆಗಳ ತನಿಖೆ ನ್ಯಾಯಾಲಯದ ಮೇಲ್ನೋಟದಲ್ಲಿ ನಡೆಸಬೇಕು ಎಂಬುದು ಮೃತ ಯುವತಿಯ ಹೆತ್ತವರ ಪ್ರಮುಖ ಬೇಡಿಕೆಯಾಗಿದೆ.ಈ ಸಂಬಂಧ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡುವ ಸಾಧ್ಯತೆಯಿದೆ.


- Advertisement -