Wednesday, July 2, 2025
spot_imgspot_img
spot_imgspot_img

ಏಳು ವರ್ಷದ ಬಾಲಕಿಯ ಮೇಲೆ ಇಬ್ಬರು ಕಾಮುಕರ ಅತ್ಯಾಚಾರ!

- Advertisement -
- Advertisement -

ಉತ್ತರ ಪ್ರದೇಶ: ಏಳು ವರ್ಷದ ಬಾಲಕಿಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿದ ಪ್ರಕರಣ ಮುಜಾಫರ್ ನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.


ಕೆಲ ಗಂಟೆ ಕಾಲ ನಾಪತ್ತೆಯಾಗಿದ್ದ ಬಾಲಕಿ ಆಕೆಯ ಕುಟುಂಬದವರ ಹುಡುಕಾಟದ ಬಳಿಕ ಶುಕ್ರವಾರ ಸಂಜೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬುಧಾನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗ್ರಾಮದ ಹತ್ತಿರದ ಮನೆಯ ಮೇಲೆ ಬಾಲಕಿ ಪತ್ತೆಯಾಗಿದ್ದು, ರಕ್ತಸ್ರಾವ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.


ಬಾಲಕಿಯನ್ನು ಹತ್ತಿರದ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಅಪ್ರಾಪ್ತ ಬಾಲಕಿಯ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.


ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಭಾರತೀಯ ದಂಡ ಸಂಹಿತೆ ಸೆಕ್ಷನ್ 376ಡಿ(ಸಾಮೂಹಿಕ ಅತ್ಯಾಚಾರ) ಮತ್ತು ಪೊಕ್ಸೊ ಕಾಯ್ದೆಯಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಗಿರಿಜಾ ಶಂಕರ್ ತ್ರಿಪಾಠಿ ತಿಳಿಸಿದ್ದಾರೆ.

- Advertisement -

Related news

error: Content is protected !!