

ಕಡಬ: ಸುಬ್ರಹ್ಮಣ್ಯದಲ್ಲಿ ಮಧ್ಯರಾತ್ರಿ ವೇಳೆ ದನವೊಂದನ್ನು ಕಳವು ಮಾಡಿಕೊಂಡು ಕಾರಿನಲ್ಲಿ ಸಾಗಿಸಿದ ಘಟನೆ ಬೆಳಕಿಗೆ ಬಂದಿದೆ.



ಈ ಕೃತ್ಯ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪ್ರಕರಣ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮೇ.6ರಂದು ಬೆಳಗಿನ ಜಾವ ಸುಮಾರು 2.30ರಿಂದ 2.50ರ ನಡುವೆ ಸುಬ್ರಹ್ಮಣ್ಯದ ಷಷ್ಠಿ ಲಾಡ್ಜ್ ಎದುರಿನ ರಸ್ತೆಯಲ್ಲಿ ನಿಂತಿದ್ದ ದನವೊಂದನ್ನು ಅಪರಿಚಿತರು ಹಿಡಿದು ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಸಿಕೊಂಡು ತೆರಳಿರುವುದು ದೃಶ್ಯಗಳಲ್ಲಿ ಕಂಡುಬಂದಿದೆ.
ಈ ಕುರಿತು ಶೇಖರ ಎ. ಅವರು ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.16/2026 ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 303(2), 3(5), ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆ ಕಾಯ್ದೆ-2020ರ ಕಲಂ 4, 5, 12, ಪ್ರಾಣಿ ಹಿಂಸಾತ್ಮಕ ತಡೆ ಕಾಯ್ದೆ-1960ರ ಕಲಂ 11(1)(ಡಿ) ಹಾಗೂ ಐಎಂವಿ ಕಾಯ್ದೆ-1988ರ ಕಲಂ 66 ಮತ್ತು 192(A) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.








