- Advertisement -
- Advertisement -
ವಿಶ್ವಹಿಂದೂ ಪರಿಷತ್ ,ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಬಂಟ್ವಾಳ ಪುರಸಭೆ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಮೇಲೆ FIR ದಾಖಲಾಗಿದೆ.
ಮಂಡ್ಯ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂದೂಗಳೆಲ್ಲಾ ಒಟ್ಟಾಗಿ ದಾಳಿ ಮಾಡಿದರೆ ಏನಾಗಬಹುದು ಎಂದು ಶರಣ್ ಪಂಪ್‌ವೆಲ್ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಎಂಬಾತ ಧ್ವನಿ ಸಂದೇಶದ ಮೂಲಕ ಧಮ್ಮಿ ಹಾಕಿದ ಆಡಿಯೋ ವೈರಲ್ ಆಗಿದೆ. ಇದು ಇಡೀ ಹಿಂದೂ ಸಮಾಜದ ಮೇಲೆ ಬೆದರಿಕೆಯಾಗಿದ್ದು, ಈತನನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳುವಂತೆ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
- Advertisement -