Friday, March 29, 2024
spot_imgspot_img
spot_imgspot_img

ಜಿಲ್ಲಾಡಳಿತದಿಂದ ಅಶಕ್ತರ ಮನೆ ಬಾಗಿಲಿಗೆ ಲಸಿಕೆ ಅಭಿಯಾನ

- Advertisement -G L Acharya panikkar
- Advertisement -

ಮಂಗಳೂರು: ಜಿಲ್ಲೆಯಲ್ಲಿ ಉಚಿತ ಲಸಿಕಾ ಶಿಬಿರ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿರುವವರು ಮತ್ತು ಅಶಕ್ತ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ ಹಾಕಿಸಿಕೊಳ್ಳಲು ಸಾಧ್ಯವಾಗದೇ ಇರುವವರ ಮನೆಗಳಿಗೆ ತೆರಳಿ ಲಸಿಕೆ ನೀಡಲು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.

ಜಿಲ್ಲಾಡಳಿತ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರೋಟರಿ ಕ್ಲಬ್ ಮಂಗಳೂರು ಹಾಗೂ ಬ್ಯಾಂಕ್ ಆಫ್ ಬರೋಡ ಸಹಯೋಗದೊಂದಿಗೆ ಆರೋಗ್ಯ ಕಾರ್ಯಕರ್ತರು ಮನೆಗಳಿಗೆ ಬಂದು ಲಸಿಕೆ ಹಾಕಲಿದ್ದಾರೆ. ಜಿಲ್ಲಾಡಳಿತದ ಅಧಿಕೃತ ವೆಬ್‌ಸೈಟ್‌ನಲ್ಲಿ ನೋಂದಾಯಿಸಬೇಕು. ನೊಂದಣಿ ಮಾಡಿದ ಬಳಿಕ ದಿನ ನಿಗದಿಪಡಿಸಿ ಮನೆಗೆ ಬಂದು ಲಸಿಕೆ ನೀಡಲಾಗುವುದು.


ಮನೆ ಮನೆ ಲಸಿಕಾ ವಾಹನಕ್ಕೆ ದಿನಾಂಕ ಶನಿವಾರ (ಜೂನ್ 19) ಬೆಳಿಗ್ಗೆ 9.30 ಕ್ಕೆ ನಗರದ ಹಂಪನಕಟ್ಟೆಯಲ್ಲಿರುವ ಯುನಿವರ್ಸಿಟಿ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಲಾಗಿದೆ.

ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಜೂನ್ 21 ರಿಂದ ಕೋವಿಶೀಲ್ಡ್ ಲಸಿಕೆ ಹಾಕುವ ಕಾರ್ಯಕ್ರಮ ಆರಂಭವಾಗಲಿದೆ. ಅಗತ್ಯ ಲಸಿಕೆಗಳು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತಲುಪಿದ್ದು, ನಗರದ ಪಂಪ್‌ವೆಲ್‌ನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್‌ನಲ್ಲಿ ಲಸಿಕೆ ಕಾರ್ಯಕ್ರಮ ಆರಂಭವಾಗಲಿದೆ. ಸ್ಥಳದಲ್ಲಿ 10 ನೋಂದಣಿ ಕೌಂಟರ್‌ಗಳನ್ನು ತೆರೆಯಲಾಗಿದ್ದು, ಲಸಿಕೆ ಪಡೆಯುವವರ ಅನುಕೂಲಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ.

- Advertisement -

Related news

error: Content is protected !!