Monday, June 30, 2025
spot_imgspot_img
spot_imgspot_img

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ; ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಆಗ್ರಹ..!

- Advertisement -
- Advertisement -

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದಾರೆ.

ಪ್ರತಿಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಶಾಸಕರುಗಳಾದ ಕೆ.ಗೋಪಾಲಯ್ಯ, ಅಶ್ವಥ್ ನಾರಾಯಣ, ಬೈರತಿ ಬಸವರಾಜ್, ರವಿಕುಮಾರ್ ಸೇರಿದಂತೆ ಪ್ರಮುಖ ಮುಖಂಡರ ನಿಯೋಗವು ವಿಧಾನಸೌಧದಿಂದ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ಸಲ್ಲಿಸಿ ಮಧ್ಯಪ್ರವೇಶಕ್ಕೆ ಆಗ್ರಹಿಸಿದರು.

ಪರಿಶಿಷ್ಟ ಸಮುದಾಯಕ್ಕೆ ಸೇರಿದ ಹಣವನ್ನು ಅಕ್ರಮವಾಗಿ ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಸಚಿವರ ರಾಜೀನಾಮೆ ಪಡೆಯಲು ಮುಖ್ಯಮಂತ್ರಿಗಳಿಗೆ ಭಯ ಇದ್ದಂತಿದೆ ಎಂದು ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.ಪ್ರಕರಣವನ್ನು ರಾಜ್ಯ ಸರಕಾರವು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕೆಂದೂ ಅವರು ಒತ್ತಾಯಿಸಿದರು. ದಲಿತರ ಅಭಿವೃದ್ಧಿಗಾಗಿ ಬಳಸಬೇಕಿದ್ದ ಹಣವನ್ನು ಹೈದರಾಬಾದ್‍ನಲ್ಲಿ 18 ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ವರ್ಗಾಯಿಸಲಾಗಿದೆ ಎಂದೂ ಆಕ್ಷೇಪಿಸಿದರು.

- Advertisement -

Related news

error: Content is protected !!