Sunday, June 14, 2026
spot_imgspot_img
spot_imgspot_img

ವಾಲ್ಮೀಕಿ ಹಗರಣ: ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಗರಣ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕೆಂದು ಕೋರಿ ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ರಿಟ್ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೆಪ್ಟೆಂಬರ್ 30ರಂದು ಮುಕ್ತಾಯಗೊಳಿಸಿ ನ.13ಕ್ಕೆ ತೀರ್ಪು ಕಾಯ್ದಿರಿಸಿತ್ತು.

ಬೆಂಗಳೂರು ಪೂರ್ವ ವಲಯದ ಸಿಬಿಐ ಡಿಜಿಎಂ ಜೆ. ಮಹೇಶ್ ಎಂಬುವವರು ಈ ಹಿಂದೆಯೇ ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು, ಖಾಸಗಿ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿ ದೂರಿನಲ್ಲಿ ಉಲ್ಲೇಖಿಸಿದ್ದರು. ಯೂನಿಯನ್ ಬ್ಯಾಂಕ್ ಹಿರಿಯ ಅಧಿಕಾರಿಗಳ ಪತ್ರದ ಅನುಸಾರ ಬ್ಯಾಂಕಿನ ಮೂವರು ಸೇರಿ ಐವರ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.

ಈ ಮಧ್ಯೆ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಿ ಆದೇಶ ಹೊರಡಿಸಿತ್ತು. ಎಸ್‌ಐಟಿ ಈಗಾಗಲೇ ಪ್ರಕರಣದ ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿಸಿದೆ. ವಾಲ್ಮಿಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆಯಾದ ಬಗ್ಗೆ ಈಗಾಗಲೇ ಇಡಿ ಸಹ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಿದೆ.

- Advertisement -

Related news

error: Content is protected !!