- Advertisement -
- Advertisement -



ನವದೆಹಲಿ: ರಾಷ್ಟ್ರಗೀತೆ ಜನಗಣಮನಕ್ಕೆ ಅಡ್ಡಿಪಡಿಸಿದರೆ ಶಿಕ್ಷೆ ವಿಧಿಸಲಾಗುತ್ತದೆ. ಅದರಂತೆ ಇನ್ನು ಮುಂದೆ ವಂದೇ ಮಾತರಂ ಗೀತೆಗೆ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲುಶಿಕ್ಷೆ ವಿಧಿಸಲಾಗುತ್ತದೆ.
ಈ ಕುರಿತು ಮಳೆಗಾಲದ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ವಿಧೇಯಕದಲ್ಲಿ ಪ್ರಸ್ತಾವನೆಯಿದೆ. ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ವಿಧೇಯಕ-2026 ಅನ್ನು ಪರಿಶೀಲನೆ ಮತ್ತು ಅಂಗೀಕಾರಕ್ಕಾಗಿ ರಾಜ್ಯಸಭೆ ಕಾರ್ಯಸೂಚಿಯಲ್ಲಿ ಪಟ್ಟಿ ಮಾಡಿದ್ದರು. ಇದೀಗ ವಿಧೇಯಕವನ್ನು ಅವರು ಸದನದಲ್ಲಿ ಮಂಡಿಸಲಿದ್ದಾರೆ.
ಈ ವಿಧೇಯದ ಪ್ರಕಾರ, ಉದ್ದೇಶಪೂರ್ವಕವಾಗಿ ರಾಷ್ಟ್ರಗೀತೆ, ವಂದೇಮಾತರಂಗೆ ಅಡ್ಡಿಪಡಿಸಿದರೆ 3 ವರ್ಷಗಳವರೆಗೆ ಜೈಲುಶಿಕ್ಷೆ, ದಂಡ ವಿಧಿಸಬಹುದಾಗಿದೆ. ಸರ್ಕಾರ ಇತ್ತೀಚೆಗಷ್ಟೇ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆ ಹಾಡುವುದನ್ನು ಕಡ್ಡಾಯಗೊಳಿಸಿತ್ತು.
- Advertisement -








