- Advertisement -
- Advertisement -
ಬೆಂಗಳೂರು: ನಾಡಿನೆಲ್ಲೆಡೆ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಮನೆಮಾಡಿದೆ. ವಿವಿಧ ದೇವಸ್ಥಾನಗಳಲ್ಲಿ ಪೂಜೆ ನಡೆಯುತ್ತಿದೆ. ಮತ್ತೊಂದುಕಡೆ ಕಡೆ ಮನೆಗಳಲ್ಲೂ ಕೂಡ ಅಷ್ಟಲಕ್ಷ್ಮೀಗೆ ಪೂಜೆ ಸಲ್ಲಿಸಲಾಗುತ್ತಿದೆ.
ತಾಯಿಗೆ ವಿಶೇಷ ಅಭಿಷೇಕ ಹಾಗೂ ಪೂಜೆ ಸಲ್ಲಿಸಲಾಗುತ್ತಿದೆ. ಇನ್ನು ದೇವಸ್ಥಾನಕ್ಕೆ ಬರುವವರಿಗೆ ಮಾಸ್ಕ್ ಇದ್ರೆ ಮಾತ್ರ ಪ್ರವೇಶ. ಇದಲ್ಲದೇ, ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಸರ್ ಬಳಕೆ ಕೂಡ ಕಡ್ಡಾಯವಾಗಿದೆ.
ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ದೇವರ ದರ್ಶನ ಪಡೆಯಲು ಭಕ್ತರ ದಂಡು ದೇವಸ್ಥಾನದತ್ತ ಹರಿದುಬರುತ್ತಿದೆ. ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.
- Advertisement -