Monday, April 29, 2024
spot_imgspot_img
spot_imgspot_img

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ; ಬಿಗ್ ಬಾಸ್ ಮನೆಯಿಂದಲೇ ಬಂಧಿಸಿ ಕರೆದೊಯ್ದ ಪೊಲೀಸರು..!!

- Advertisement -G L Acharya panikkar
- Advertisement -
vtv vitla

ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯನ್ನು ಅರೆಸ್ಟ್ ಮಾಡಲಾಗಿದೆ. ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಹುಲಿ ಉಗುರು ಇರುವ ಪೆಂಡೆಂಟ್‌ ಧರಿಸಿದ್ದರು ಎಂಬ ಆರೋಪದ ಮೇಲೆ ಬಂಧನವಾಗಿದೆ.

ಸದ್ಯ ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಅರೆಸ್ಟ್ ಮಾಡಲಾಗಿದೆ. ರಾಮೋಹಳ್ಳಿ ಅರಣ್ಯಾಧಿಕಾರಿಗಳಿಂದ ವರ್ತೂರು ಸಂತೋಷ್ ಬಂಧನವಾಗಿದ್ದು, ಸದ್ಯ ರಾಮೋಹಳ್ಳಿ ಅರಣ್ಯಾಧಿಕಾರಿಗಳ ಕಸ್ಟಡಿಯಲ್ಲಿದ್ದಾರೆ.

ವೈಲ್ಡ್​ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಬಂಧನವಾಗಿದೆ. ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕುರಿತು ಎಫ್​ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ವರ್ತೂರು ಸಂತೋಷ್ ನನ್ನ ಬಂಧಿಸಿರುವ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಟಿವಿಯಲ್ಲಿ ಹುಲಿ ಉಗುರು ಪೆಂಡೆಂಟ್ ಹಾಕಿಕೊಂಡ ವಿಡಿಯೋಗೆ ಕೇಸ್ ಹಾಕಲಾಗಿದೆ. ಬಂಧಿತ ಸಂತೋಷ್ ಅವರನ್ನು ಕಗ್ಗಲಿಪುರ ಅರಣ್ಯ ಇಲಾಖೆ ಕಚೇರಿಯಲ್ಲಿಟ್ಟು ವಿಚಾರಿಸಲಾಗುತ್ತಿದೆ. ಇಂದು ಮ್ಯಾಜಿಸ್ಟ್ರೇಟ್ ಮುಂದೆ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ ಎಂದು ಸುವರ್ಣ ನ್ಯೂಸ್ ಗೆ ಬೆಂಗಳೂರು ಅರಣ್ಯ ಸಂರಕ್ಷಣಾ ಅಧಿಕಾರಿ ರವೀಂದ್ರ ಮಾಹಿತಿ ನೀಡಿದ್ದಾರೆ. ಹಳ್ಳಿಕಾರ್‌ ತಳಿಯ ಜಾನುವಾರು ಸಾಕಾಣಿಕೆ ಮೂಲಕ ಜನಪ್ರಿಯತೆ ಪಡೆದಿರುವ ವರ್ತೂರು ಸಂತೋಷ್‌ ಹಳ್ಳಿಕಾರ್‌ ಕ್ಯಾಟಲ್‌ ಬ್ರೀಡ್‌ ಅಥವಾ ಅಖಿಲ ಭಾರತ ಹಳ್ಳಿಕಾರ್‌ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಇವರು ಹಳ್ಳಿಕಾರ್‌ ಒಡೆಯ ಎಂದೇ ಪ್ರಸಿದ್ದಿ ಪಡೆದಿದ್ದಾರೆ.

- Advertisement -

Related news

error: Content is protected !!