- Advertisement -
- Advertisement -
ಬೆಂಗಳೂರು: ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಹಲವಾರು ಕಡೆ ಸಮಸ್ಯೆ ಉಂಟಾಗಿದೆ. ಹೀಗಾಗಿ ಮುಂಜಾಗ್ರತ ಕ್ರಮ ವಹಿಸುವಂತೆ ಎಲ್ಲ ಜಿಲ್ಲೆಯ ಉಸ್ತುವಾರಿ ಸಚಿವರಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.
ಆಸ್ಪತ್ರೆಯಲ್ಲಿಂದೇ ಸೂಚನೆ ರವಾನಿಸಿರುವ ಸಿಎಂ, ಸಚಿವರು ಕ್ಷೇತ್ರ ಬಿಟ್ಟು ತೆರಳದೇ, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಕ್ರಮ ತೆಗೆದುಕೊಳ್ಳಿ. ಸ್ಥಳದಲ್ಲೇ ಪರಿಹಾರ ವಿತರಣೆ ಮಾಡಿ. ಈಗಾಗಲೇ 50 ಕೋಟಿ ರೂ.ಪರಿಹಾರ ಧನ ಬಿಡುಗಡೆ ಮಾಡಲಾಗಿದೆ. ಇನ್ನೂ ಅಗತ್ಯವಿದ್ದರೆ ಮತ್ತಷ್ಟು ಪರಿಹಾರ ಧನ ಬಿಡುಗಡೆ ಮಾಡಲಾಗುವುದು. ಅತೀ ತುರ್ತು ಕಾರ್ಯಗಳಿಗೆ ನೀವೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
- Advertisement -