Thursday, May 2, 2024
spot_imgspot_img
spot_imgspot_img

ವೀರಕಂಭ ಗ್ರಾಮ ಪಂಚಾಯತ್; ನೂತನ ಅಧ್ಯಕ್ಷರಾಗಿ ಲಲಿತಾ ಹಾಗೂ ಉಪಾಧ್ಯಕ್ಷರಾಗಿ ಜನಾರ್ಧನ ಪೂಜಾರಿ ಆಯ್ಕೆ

- Advertisement -G L Acharya panikkar
- Advertisement -

ವಿಟ್ಲ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಕಾಂಗ್ರೇಸ್‌ ಬೆಂಬಲಿತ ಅಭ್ಯರ್ಥಿಗಳು ನೂತನ ಅಧ್ಯಕ್ಷರಾಗಿ ಲಲಿತಾ ಹಾಗೂ ಉಪಾಧ್ಯಕ್ಷರಾಗಿ ಜನಾರ್ಧನ ಪೂಜಾರಿ ಆಯ್ಕೆಯಾಗಿದ್ದಾರೆ.

ವೀರಕಂಭ ಗ್ರಾಮ ಪಂಚಾಯತ್ ಒಟ್ಟು 14 ಸದಸ್ಯರನ್ನು ಹೊಂದಿದ್ದು ಈ ಪೈಕಿ 7ಮಂದಿ ಕಾಂಗ್ರೆಸ್ ಬೆಂಬಲಿತ 7ಮಂದಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸದಸ್ಯರಾಗಿದ್ದು ಎರಡು ಪಕ್ಷಗಳು ಸಮಬಲ ಹೊಂದಿದ್ದು ಆಯ್ಕೆ ಬಹಳ ಕುತೂಹಲಕಾರಿ ಆಗಿ ಪರಿಣಮಿಸಿತ್ತು. ಮತದಾನ ನಡೆದು ಎಲ್ಲಾ ಅಭ್ಯರ್ಥಿಗಳು ಸಮಾನ ಮತಗಳನ್ನು ಪಡೆದ್ದುದರಿಂದ ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಲಾಯಿತು.

ಜಿ.ಪಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಜಿ.ಕೆ.ನಾಯ್ಕ್ ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿಶಾಂತ್ ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.

- Advertisement -

Related news

error: Content is protected !!