Thursday, July 23, 2026
spot_imgspot_img
spot_imgspot_img

ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆಗೆ ತೆರಳುತ್ತಿದ್ದ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ

- Advertisement -
- Advertisement -

ಕುಕ್ಕೆ ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ನಡೆಯುತ್ತಿದ್ದ ಮದುವೆಗೆ ಆಗಮಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದ್ದು, ಅಪಘಾತದಲ್ಲಿ 20ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ವಧು – ವರ ಇಬ್ಬರೂ ನಿನ್ನೆಯೇ ಹಾಲ್‌ಗೆ ಬಂದಿದ್ದರು. ಹುಡುಗನ ಕಡೆಯವರು ಇಂದು ಟೆಂಪೋ ವಾಹನದಲ್ಲಿ ಬರುತ್ತಿದ್ದ ವೇಳೆ ಬಿಸ್ಲೆ ತಿರುವಿನಲ್ಲಿ ವಾಹನ ಇಪ್ಪತ್ತಕ್ಕೂ ಅಧಿಕ ಅಡಿ ಆಳಕ್ಕೆ ಪಲ್ಟಿಯಾಗಿ ಬಿದ್ದಿದೆ.

ಟೆಂಪೋದಲ್ಲಿದ್ದ ಇಪ್ಪಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ. ಅವರನ್ನು ಪ್ರಥಮ ಚಿಕಿತ್ಸೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!