Saturday, May 15, 2021
spot_imgspot_img
spot_imgspot_img

ಕನ್ನಡ ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ವಿಧಿವಶ

- Advertisement -
- Advertisement -

ಬೆಂಗಳೂರು: ಕನ್ನಡ ನಿಘಂಟು ತಜ್ಞ ಪ್ರೊ. ಜಿ.ವೆಂಕಟಸುಬ್ಬಯ್ಯ ನಿಧನರಾಗಿದ್ದಾರೆ. 107 ವರ್ಷ ವಯಸ್ಸಿನ ಅವರು, ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅವರು ವಿಧಿವಶರಾಗಿದ್ದಾರೆ. 1913 ಆಗಸ್ಟ್ 13 ರಂದು ಜನಿಸಿದ ವೆಂಕಟಸುಬ್ಬಯ್ಯರವರು ಭಾಷಾ ತಜ್ಞ, ಸಂಶೋಧಕ, ಬರಹಗಾರ, ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು.

ಕನ್ನಡ ನಿಘಂಟು ಶಾಸ್ತ್ರ ಪರಿಚಯ ಅವರ ಶ್ರೇಷ್ಠ ಗ್ರಂಥವಾಗಿದೆ. ಇಗೋ ಕನ್ನಡದ ಮೂಲಕ ಇ – ನಿಘಂಟು ಸೃಷ್ಟಿಸಿದ್ದರು. ಜೀವಿ ಎಂದೇ ಸಾಹಿತ್ಯ ವಲಯದಲ್ಲಿ ಖ್ಯಾತರಾಗಿದ್ದ ಅವರು ಪಂಪ ಪ್ರಶಸ್ತಿ, ಕನ್ನಡ ಸಾಹಿತ್ಯ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿ, ಪದ್ಮಶ್ರೀ, ಭಾಷಾ ಸಮ್ಮಾನ್ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

driving
- Advertisement -
- Advertisement -

MOST POPULAR

HOT NEWS

Related news

error: Content is protected !!