Friday, June 5, 2026
spot_imgspot_img
spot_imgspot_img

ಹಿರಿಯ ನಟಿ ‘ಅಭಿನಯ ಸರಸ್ವತಿ’ ಖ್ಯಾತಿಯ ಬಿ.ಸರೋಜಾದೇವಿ ನಿಧನ..!

- Advertisement -
- Advertisement -

ಬೆಂಗಳೂರು: ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಬಿ.ಸರೋಜಾದೇವಿ(87) ನಿಧನರಾಗಿದ್ದಾರೆ.

ಜನವರಿ 7, 1938 ರಲ್ಲಿ ಜನಿಸಿದ್ದ ಸರೋಜಾದೇವಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಸಾಧನೆಗೆ ಇವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ನೀಡಿ ಪುರಸ್ಕರಿಸಿತ್ತು.

ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದರು.

- Advertisement -

Related news

error: Content is protected !!