Monday, July 22, 2024
spot_imgspot_img
spot_imgspot_img

ಹಿರಿಯ ಸಾಹಿತಿ ನಾಡೋಜ ಕಮಲಾ ಹಂಪನಾ ನಿಧನ

- Advertisement -G L Acharya panikkar
- Advertisement -

ಕನ್ನಡದ ಖ್ಯಾತ ಹಿರಿಯ ಸಾಹಿತಿ ಕಮಲಾ ಹಂಪನಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಕಮಲಾ ಹಂಪನ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ 1935ರ ಅಕ್ಟೋಬರ್​ 28ರಂದು ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ, ಪಿಹೆಚ್​ಡಿ ಪದವಿ ಪಡೆದರು. ತಮ್ಮ ಅಧ್ಯಯನ, ಅಧ್ಯಾಪನ, ಲೇಖನ,ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡುತ್ತಾ ಬಂದಿರುವ ಪ್ರೊ.ಕಮಲಾ ಹಂಪನಾ ಅವರು ಸಮಕಾಲೀನ ಕನ್ನಡ ಸಾಹಿತ್ಯದ ಹಿರಿಯ ಬರಹಗಾರ್ತಿ.

ಕಮಲಾ ಹಂಪನಾ ಅವರು ವಿದ್ವಾಂಸರಾಗಿ, ಪ್ರಾಧ್ಯಾಪಕರಾಗಿ, ಪ್ರಾಚೀನ ಅರ್ವಾಚೀನ ಕೃತಿಗಳ ಅನುಸಂಧಾನಕಾರರಾಗಿ ಶ್ರಮಿಸಿದ್ದಾರೆ. ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು ಕೈಗೊಂಡು ಆ ಎಲ್ಲ ಪ್ರಕಾರಗಳಲ್ಲೂ ಕೊಡುಗೆಗಳನ್ನು ನೀಡಿದ್ದಾರೆ. 2003 ಡಿಸೆಂಬರ್ ತಿಂಗಳಲ್ಲಿ ಮೂಡುಬಿದಿರೆಯಲ್ಲಿ ಜರುಗಿದ 71 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಮಲಾ ಹಂಪನಾ ಅಧ್ಯಕ್ಷರಾಗಿದ್ದರು.ಸಾಹಿತ್ಯ ಕೃತಿಗಳು ನಕ್ಕಿತು ಹಾಲಿನ ಬಟ್ಟಲು, ರೆಕ್ಕೆ ಮುರಿದಿತ್ತು, ಚಂದನಾ, ಬಣವೆ ಸೇರಿದಂತೆ ಹಲವು ಸಾಹಿತ್ಯಗಳನ್ನು ರಚಿಸಿದ್ದಾರೆ.

ಕಮಲಾ ಹಂ.ಪಾ ನಾಗರಾಜಯ್ಯ ಅವರಿಗೆ ಸಾಹಿತಿ, ಸಂಶೋಧಕರಾಗಿರುವ ಪತಿ ಹಂ.ಪ ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಇದ್ದಾರೆ. ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರು, ಅಮೆರಿಕನ್​ ಡಾಲರ್ಸ್​ ಕಾಲೋನಿಯಲ್ಲಿ ಪುತ್ರಿ ಆರತಿ ಮನೆಯಲ್ಲಿ ವಾಸವಿದ್ದರು. ಶುಕ್ರವಾರ ರಾತ್ರಿ 10 ಗಂಟೆ ವೇಳೆಗೆ ಅವರಿಗೆ ಹೃದಯಾಘಾತ ಆಗಿತ್ತು. ಎಂ.ಎಸ್​ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ರಾಜಾಜಿನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸಂಜೆಯ ತನಕ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅವರ ಇಚ್ಛೆಯಂತೆ ರಾಮಯ್ಯ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುವುದು ಎಂದು ಅವರ ಕುಟುಂಬ ತಿಳಿಸಿದೆ.

- Advertisement -

Related news

error: Content is protected !!