Thursday, April 25, 2024
spot_imgspot_img
spot_imgspot_img

ಕಡಬ: ಎರಡು ಕ್ರಿಮಿನಲ್ ಕೇಸ್ ದಾಖಲಾಗಿದ್ದ ವ್ಯಕ್ತಿಯಿಂದ ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮನವಿ

- Advertisement -G L Acharya panikkar
- Advertisement -

ಕಡಬ: ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕುಟ್ರುಪ್ಪಾಡಿ ನಿವಾಸಿ ವಿಕ್ಟರ್ ಮಾಟೀ೯ಸ್ ಎಂಬವರು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ತಾನು ಸ್ವತಃ ಬಲವಂತದ ಮತಾಂತರ ಆರೋಪ ಎದುರಿಸುತ್ತಿರುವ ವಿಕ್ಟರ್ ಮಾಟೀ೯ಸ್ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಯ ಬಗ್ಗೆ ಸಾವ೯ಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ನ್ಯಾ|ಪಿ.ಬಿ ವರಾಲೆ ನೇತೃತ್ವದ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಲಾಗಿತ್ತು. ಅಜಿ೯ದಾರನ ಪರ ವಕೀಲರು ವಾದ ಮಂಡಿಸಿ, ರಾಜ್ಯದಲ್ಲಿ ಮತಾಂತರ ನಿಷೇಧಿಸಲು ರಾಜ್ಯ ಸರ್ಕಾರ “ಮತಾಂತರ ನಿಷೇಧ ಕಾಯ್ದೆ 2020” ನ್ನು ಜಾರಿಗೆ ತಂದಿದೆ. ಇದು ಸಂವಿಧಾನ ವಿರೋಧಿಯಾಗಿದ್ದು, ಇದನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿದರು.

ಸರಕಾರದ ಪರವಾಗಿ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ ನಾವದಗಿ, ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಅರ್ಜಿ ಸಲ್ಲಿಸಿರುವ ವ್ಯಕ್ತಿಯ ಮೇಲೆ ಬಲವಂತದ ಮತಾಂತರ ಆರೋಪದಲ್ಲಿ ಎರಡು ಕ್ರಿಮಿನಲ್ ಕೇಸ್ ದಾಖಲಾಗಿದೆ. ಸ್ವತಃ ಆರೋಪ ಎದುರಿಸುತ್ತಿರುವ ಈ ವ್ಯಕ್ತಿಯ ಅರ್ಜಿಯನ್ನು ಪರಿಗಣಿಸಬಾರದು ಎಂದು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್ 28 ಕ್ಕೆ ಮುಂದೂಡಿದೆ.

- Advertisement -

Related news

error: Content is protected !!