Monday, April 29, 2024
spot_imgspot_img
spot_imgspot_img

ಬುರ್ಖಾ ಧರಿಸಿ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್; ಆರೋಪಿ ಐಟಿ ಉದ್ಯೋಗಿ ಅರೆಸ್ಟ್

- Advertisement -G L Acharya panikkar
- Advertisement -

ಬುರ್ಖಾ ಧರಿಸಿ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ 23 ವರ್ಷದ ಐಟಿ ಉದ್ಯೋಗಿಯನ್ನು ಕೊಚ್ಚಿ ಪೊಲೀಸರು ಬಂಧಿಸಿದ್ದಾರೆ.

ಕೇರಳದ ಜನಪ್ರಿಯ ಮಾಲ್‌ನಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಿ.ಟೆಕ್ ಪದವೀಧರನಾದ ಐಟಿ ಉದ್ಯೋಗಿ ಅಭಿಮನ್ಯು(23) ಎಂದು ಎನ್ನಲಾಗಿದೆ.

ಆರೋಪಿಯು ಬುರ್ಖಾ ಧರಿಸಿ ಮಹಿಳೆಯರ ವಾಶ್‌ರೂಮ್‌ಗೆ ತೆರಳಿ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ.ಆತ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಹೊರಬಂದು ನಿಂತಿದ್ದ, ಅವನ ಅನುಮಾನಾಸ್ಪದ ವರ್ತನೆಯನ್ನು ಗಮನಿಸಿದ ಮಾಲ್‌ನ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ತಕ್ಷಣ ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ವಿಚಾರಣೆ ವೇಳೆ ಆತ ಮಹಿಳೆಯ ವೇಷ ಧರಿಸಿದ್ದು, ವಾಶ್‌ರೂಮ್‌ನಲ್ಲಿದ್ದ ದೃಶ್ಯಗಳನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಪೊಲೀಸರು ಅಭಿಮನ್ಯು ಮತ್ತು ಆತನ ಫೋನ್ ಮತ್ತು ಅಪರಾಧ ಮಾಡಲು ಬಳಸಿದ ಬುರ್ಖಾವನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳೀಯ ನ್ಯಾಯಾಲಯದಿಂದ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

- Advertisement -

Related news

error: Content is protected !!