Tuesday, April 23, 2024
spot_imgspot_img
spot_imgspot_img

ಇಂದಿನಿಂದ ವಿಧಾನ ಮಂಡಲ ಅಧಿವೇಶನ- ಸರ್ಕಾರಕ್ಕೆ ಸಿಡಿ ಜೊತೆಗೆ ಮೀಸಲಾತಿ ಅಗ್ನಿಪರೀಕ್ಷೆ

- Advertisement -G L Acharya panikkar
- Advertisement -

ಬೆಂಗಳೂರು: ಇಂದಿನಿಂದ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಲಿದೆ. ಸುಮಾರು 19 ದಿನಗಳ ಕಾಲ ಈ ಅಧಿವೇಶನ ನಡೆಯಲಿದೆ.

ಸೋಮವಾರ ಸಿಎಂ ಯಡಿಯೂರಪ್ಪ ರಾಜ್ಯದ ಬಜೆಟ್ ಮಂಡನೆ ಮಾಡಲಿದ್ದಾರೆ. ಅದಕ್ಕೂ ಮುನ್ನ ಇಂದು ಮತ್ತು ನಾಳೆ ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ.ವಿಧಾನಸಭೆ ಕಲಾಪ ಪ್ರಾರಂಭವಾದ ಕೂಡಲೇ ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ಚರ್ಚೆಗೆ ಅವಕಾಶ ಕೊಡಲಾಗಿದೆ.

ವಿಧಾನ ಪರಿಷತ್ ನಲ್ಲಿ ಮೊದಲು ಅಗಲಿದ ಗಣ್ಯರಿಗೆ ಸಂತಾಪ ಸೂಚಿಸುವ ಕಾರ್ಯ ಕಲಾಪ ನಡೆಯುತ್ತೆ. ಬಳಿಕ ಪ್ರಶ್ನೋತ್ತರ ಮತ್ತು ನಿಯಮ 330, ಗಮನ ಸೆಳೆಯುವ ಸೂಚನೆ ಬಳಿಕ ಒಂದು ರಾಷ್ಟ್ರ ಮತ್ತು ಚುನಾವಣೆ ಬಗ್ಗೆ ಚರ್ಚೆ ನಡೆಯಲಿದೆ. ಈ ಚರ್ಚೆಯೂ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಬಗ್ಗೆ ಮಾತ್ರ ಇರಲಿದೆ. ರಾಜ್ಯ ಚುನಾವಣೆ ಆಯೋಗ ನಡೆಸುವ ಚುನಾವಣೆ ಬಗ್ಗೆ ಚರ್ಚೆ ಆಗೋದಿಲ್ಲ ಅಂತ ಸ್ಪೀಕರ್ ಕಾಗೇರಿ ಸ್ಪಷ್ಟಪಡಿಸಿದ್ದಾರೆ.

ಇತ್ತ ಕಲಾಪದಲ್ಲಿ ರಾಸಲೀಲೆ ಪ್ರಕರಣ ಪ್ರಸ್ತಾಪವಾಗುವ ಸಾಧ್ಯತೆಗಳಿವೆ. ಈಗಾಗಲೇ ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಟ್ಟರೂ ಅಧಿವೇಶನದಲ್ಲಿ ಕಾಂಗ್ರೆಸ್, ಜೆಡಿಎಸ್ ಅದೇ ಅಸ್ತ್ರ ಉಪಯೋಗಿಸುವ ಸಾಧ್ಯತೆ ಇದೆ. ಜಾರಕಿಹೊಳಿ ಸಿಡಿ ವಿಚಾರ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ತಂತ್ರವಿದ್ದು, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಮುಜುಗರ ಉಂಟು ಮಾಡುವುದು, ಪಂಚರಾಜ್ಯ ಚುನಾವಣೆಯಲ್ಲಿ ಸಿಡಿ ಅಸ್ತ್ರ ಬಳಸಿ ಮತ್ತಷ್ಟು ಡ್ಯಾಮೇಜ್ ಮಾಡುವ ಸಾಧ್ಯತೆ ಇದೆ.

- Advertisement -

Related news

error: Content is protected !!