Saturday, July 25, 2026
spot_imgspot_img
spot_imgspot_img

ವಿಧಾನಸೌಧದಲ್ಲೇ ಮಳೆಗಾಲದ ಅಧಿವೇಶನ:ಸಚಿವ ಮಾಧುಸ್ವಾಮಿ

- Advertisement -
- Advertisement -

ಬೆಂಗಳೂರು: ವಿಧಾನಸೌಧದಲ್ಲೇ ಈ ಬಾರಿಯ ಮಳೆಗಾಲದ ಅಧಿವೇಶನ ನಡೆಸಲಾಗುವುದು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ತೆಗೆದುಕೊಂಡಿರುವ ತೀರ್ಮಾನಕ್ಕೆ ನಾವೆಲ್ಲರು ಒಪ್ಪಿಗೆ ಸೂಚಿಸಿದ್ದೇವೆ. ಕೊರೊನಾ ಸೋಂಕು ಹಿನ್ನಲೆಯಲ್ಲಿ ಅಧಿವೇಶನದ ವೇಳೆ ಎಲ್ಲ ಮುಂಜಾಗ್ರತ ಕ್ರಮ ಕೈಗೊಳ್ಳಲಾಗುವುದು. ಪತ್ರಕರ್ತರಿಗೆ ಎರಡು ಗ್ಯಾಲರಿಗಳ ವ್ಯವಸ್ಥೆ ಮಾಡಲಾಗುವುದು ಎಂದರು.

ಕಲಾಪದಲ್ಲಿ ಪಾಲ್ಗೊಳ್ಳುವ ಪ್ರತಿ ಸದಸ್ಯರಿಗೆ ಫೇಸ್ ಶೀಲ್ಡ್ ಹಾಗೂ ಮಾಸ್ಕ್ ನೀಡಲಾಗುವುದು. ಪ್ರತಿ ಇಲಾಖೆಯಿಂದ ಒಬ್ಬ ಅಧಿಕಾರಿಗೆ ಮಾತ್ರ ಅಧಿವೇಶನಕ್ಕೆ ಬರಲು ಅವಕಾಶ ನೀಡಲಾಗುವುದು. 70 ವರ್ಷಕ್ಕಿಂತ ಅಧಿಕ ವಯಸ್ಸಿನ ಶಾಸಕರಿಗೆ ವಿನಾಯಿತಿ ನೀಡುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮಾಹಿತಿ ನೀಡಿದರು.

- Advertisement -

Related news

error: Content is protected !!