- Advertisement -
- Advertisement -



ವಿಜಯಪುರ: ದೇವರಹಿಪ್ಪರಗಿ ತಾಲೂಕಿನ ಮಾರ್ಕಬ್ಬಿನಹಳ್ಳಿ ಕ್ರಾಸ್ ಬಳಿ ಕಬ್ಬು ಸಾಗಿಸುತ್ತಿದ್ದ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಾತಿಹಾಳ ಗ್ರಾಮದ ನಿವಾಸಿ, ಹಣಮಂತ ಪಾಳ್ಯ(21) ಮೃತಪಟ್ಟ ಸವಾರ. ದೇವರಹಿಪ್ಪರಗಿ ಪಟ್ಟಣದಲ್ಲಿ ಕೆಲಸ ಮುಗಿಸಿ ಸ್ವಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಮಾರ್ಕಬ್ಬಿನಹಳ್ಳಿ ಕ್ರಾಸ್ ಬಳಿ ಚಲಿಸುತ್ತಿದ್ದ ಕಬ್ಬಿನ ಲಾರಿಗೆ ಹಿಂಬದಿಯಿಂದ ಬೈಕ್ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ತೀವ್ರ ರಕ್ತ ಸ್ರಾವದಿಂದಾಗಿ ಹಣಮಂತ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
- Advertisement -








