Monday, July 20, 2026
spot_imgspot_img
spot_imgspot_img

ವಿಜಯಪುರ: ಹೋಟೆಲ್‌ನಲ್ಲಿ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹಾನಿ

- Advertisement -
- Advertisement -

ವಿಜಯಪುರ: ಹೋಟೆಲ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹೊತ್ತಿಯುರಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಹೊಟೇಲ್‌ನಲ್ಲಿ ನಡೆದಿದೆ.

ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮ ಲಕ್ಷಾಂತರ ಮೌಲ್ಯದ ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದು, ಬೆಂಕಿ ನಂದಿಸಿದ್ದಾರೆ. ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿರುವುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!