- Advertisement -
- Advertisement -
154 ಗ್ರಾಂ ಚಿನ್ನ, 270 ಗ್ರಾಂ ಬೆಳ್ಳಿ ಕಳವು!



ವಿಜಯಪುರ: ಗೋಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಾಶಿವರಾತ್ರಿ ಜಾಗರಣೆಯನ್ನೇ ಬಂಡವಾಳ ಮಾಡಿಕೊಂಡು ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಸೋಮಶೇಖರ ಗಣಿ ಎಂಬವರ ಮನೆ ಕಳ್ಳತನ ಮಾಡಲಾಗಿದ್ದು, ಮನೆಯಲ್ಲಿದ್ದ 40 ಸಾವಿರ ನಗದು, 154 ಗ್ರಾಂ ಚಿನ್ನಾಭರಣ, 270 ಗ್ರಾಂ ಬೆಳ್ಳಿ ಆಭರಣ ಕದ್ದು ಪರಾರಿಯಾಗಿದ್ದಾರೆ. ಮನೆಗೆ ಬೀಗ ಹಾಕಿ ಶಿವಗಿರಿಗೆ ಕುಟುಂಬಸ್ಥರು ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಸ್ಥಳಕ್ಕೆ ಗೋಲಗುಂಬಜ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು, ಶ್ವಾನದಳ ತಂಡಗಳಿಂದಲೂ ಪರೀಕ್ಷೆ ನಡೆದಿದೆ ಎಂದು ತಿಳಿದುಬಂದಿದೆ.
- Advertisement -








