Saturday, June 28, 2025
spot_imgspot_img
spot_imgspot_img

ಬಿಎಸ್​​ವೈ ಹೆಚ್ಚು ದಿನ ಅಧಿಕಾರದಲ್ಲಿ ಇರುವುದಿಲ್ಲ- ಬಸನಗೌಡ ಪಾಟೀಲ ಯತ್ನಾಳ್

- Advertisement -
- Advertisement -

ವಿಜಯಪುರ: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೆಚ್ಚು ದಿನ ಸಿಎಂ ಆಗಿ ಉಳಿಯುವುದಿಲ್ಲ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ವಾಕ್ಸಮರ ಮುಂದುವರೆಸಿದ್ದಾರೆ.

ವಿಜಯಪುರದ ವಾರ್ಡ್ 3ರಲ್ಲಿ ನಡೆದ ಹನುಮಾನ್ ದೇವಸ್ಥಾನದ ಕಾಂಪೌಂಡ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಬಿಎಸ್‍ವೈ ಸಿಎಂ ಆಗಿ ಬಹಳ ದಿನ ಉಳಿಯುವುದಿಲ್ಲ. ಕೇಂದ್ರ ಸರ್ಕಾರದವರಿಗೂ ಸಿಎಂ ಬಿಎಸ್‍ವೈ ಸಾಕಾಗಿ ಹೋಗಿದ್ದಾರೆ ಎಂದು ಹೇಳಿದ್ದಾರೆ.

 ಉತ್ತರ ಕರ್ನಾಟಕದವರು 100 ಶಾಸಕರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸುತ್ತಾರೆ. ಆದರೆ ಉಳಿದ ಭಾಗದಲ್ಲಿ ಕೇವಲ 15 ಶಾಸಕರು ಬಿಜೆಪಿಯಿಂದ ಗೆದ್ದು ಅವರಲ್ಲೇ ಒಬ್ಬರು ಸಿಎಂ ಆಗುತ್ತಾರೆ. ಹೀಗಾಗಿ ಮುಂದಿನ ಬಾರಿ ಉತ್ತರ ಕರ್ನಾಟಕದವರೇ ಸಿಎಂ ಆಗೋದು ಪಕ್ಕಾ. ಜೊತೆಗೆ ಉತ್ತರ ಕರ್ನಾಟಕದವರನ್ನೇ ಸಿಎಂ ಮಾಡುವ ಭರವಸೆಯನ್ನು ಪ್ರಧಾನಿ ಮೋದಿ ಅವರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!