Tuesday, June 9, 2026
spot_imgspot_img
spot_imgspot_img

ವಿಜಯಪುರ: ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ – ಮೂವರಿಗೆ ಗಾಯ

- Advertisement -
- Advertisement -

ವಿಜಯಪುರ: ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ – ಮೂವರಿಗೆ ಗಾಯಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ.

ರವಿಕಿರಣ ಎಂಬುವವರಿಗೆ ಸೇರಿದ ಶೆಡ್ ಮಾದರಿಯ ಪಾನ್ ಶಾಪ್‌ನಲ್ಲಿ ಘಟನೆ ನಡೆದಿದೆ. ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟದಲ್ಲಿ ಪಾನ್ ಶಾಪ್ ಒಳಗಿದ್ದ ಫ್ರಿಡ್ಜ್‌ಗೆ ಯಾವುದೇ ಹಾನಿಯಾಗಿಲ್ಲ. ಹೊರಗಡೆಯಿಂದ ಸ್ಫೋಟವಾಗಿರೋ ಶಂಕೆ ವ್ಯಕ್ತವಾಗಿದೆ. ಸ್ಫೋಟದಲ್ಲಿ ಅಂಗಡಿ ಮಾಲೀಕ ರವಿಕಿರಣ ಸೇರಿದಂತೆ ಮೂವರಿಗೆ ಗಾಯಗಳಾಗಿವೆ.

ಸದ್ಯ ಗಾಯಾಳುಗಳನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಬಲೇಶ್ವರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಅಗ್ನಿಶಾಮಕ ದಳ, ಸೊಕೋ ತಂಡ ಶ್ವಾನದಳದಿಂದ ಪರೀಕ್ಷೆ ನಡೆಸಿದ್ದಾರೆ. ಸದ್ಯ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಪೊಲೀಸ್ ತನಿಖೆಯ ಬಳಿಕ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬರಲಿದೆ.

- Advertisement -

Related news

error: Content is protected !!